Wednesday, December 4, 2024
Wednesday, December 4, 2024

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ‘ಕನಸು’ ಕಾರ್ಯಕ್ರಮ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ‘ಕನಸು’ ಕಾರ್ಯಕ್ರಮ

Date:

ಉಡುಪಿ, ಅ.28: ಪ್ರತಿಯೊಂದು ಸಾಧನೆಯೂ ಒಂದು ಕನಸಿನಿಂದ ಹುಟ್ಟಿಕೊಳ್ಳುತ್ತದೆ. ಅಂತಹ ನೂರಾರು ಕನಸನ್ನು ಹೊತ್ತಂತಹ ನಮ್ಮ ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ ವಿವಿಧ ಕಾರ್ಯಕ್ರಮಗಳ ಮೂಲಕ ಅವರ ಪ್ರತಿಭೆ ಸೂಕ್ತ ವೇದಿಕೆ ನಿರ್ಮಿಸಲು ನಮ್ಮ ಸಂಸ್ಥೆಯೂ ಯೋಜನೆಯನ್ನು ರೂಪಿಸುತ್ತಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಹೇಳಿದರು. ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಆದಿತ್ಯವಾರ ಜರಗಿದ ೨೫ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ “ಕನಸು” ವಿಶೇಷ ಕಾರ್ಯಕ್ರಮದ ಮೂಲಕ ಮಾತನಾಡಿದರು. ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಕಾರ್ಯದರ್ಶಿ ಮಾತನಾಡಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಸ್ಥೆಯೂ ಒಂದು ಕೇವಲ ಸಂಸ್ಥೆಯಾಗಿರದೇ ಸದಸ್ಯರೆಲ್ಲರಲ್ಲಿ ಭಾವನಾತ್ಮಕ ಕೌಟುಂಬಿಕ ಸಂಬಂಧ ನಿರ್ಮಿಸಿದೆ ಎಂದು ಹೇಳಿದರು.

ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ನಿಕಟ ಪೂರ್ವಾಧ್ಯಕ್ಷ ಪ್ರಶಾಂತ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ ವೇದಿಕೆಯಲ್ಲಿದ್ದರು. ಸಂಘದ ಪೂರ್ವಾಧ್ಯಕ್ಷರುಗಳಾದ ರಘುವೀರ್ ಶೆಟ್ಟಿ, ಆನಂದ ಪೂಜಾರಿ, ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷ ಸತೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಅನ್ನಪೂರ್ಣ ಕಾಮತ್, ಕೋಶಾಧಿಕಾರಿ ಆರತಿ, ಸದಸ್ಯರಾದ ಸುರೇಶ್ ಅಬ್ಬನಡ್ಕ, ಪ್ರದೀಪ್ ಸುವರ್ಣ, ಲಲಿತಾ ಆಚಾರ್ಯ, ಅಶ್ವಿನಿ ಪ್ರಭಾಕರ್, ಯೋಗೀಶ್ ಆಚಾರ್ಯ, ಕೀರ್ತನ್ ಪೂಜಾರಿ, ಪುಷ್ಪ ಕುಲಾಲ್, ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ, ಶಾಂತರಾಮ್ ಕುಲಾಲ್, ಸುಲೋಚನಾ ಕೋಟ್ಯಾನ್, ವೀಣಾ ಆಚಾರ್ಯ ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!