ಉಡುಪಿ, ಅ.29: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ದಿನಾಂಕ 1.11.2024 ರಿಂದ 3.11.2024 ರ ವರಗೆ ಗಾಂಧಿ ಮೈದಾನ ಬೈಂದೂರು ಇಲ್ಲಿ ನೆಡೆಯುವ ಬೈಂದೂರು ಉತ್ಸವದಲ್ಲಿ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನೆಡೆಯಲಿದೆ. ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗ್ರಹಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಮಣ್ಣಿನ ಹಣತೆ, ಗೋ ಉತ್ಪನ್ನ, ಹೆಬ್ರಿ ಹನಿ, ಇತ್ಯಾದಿ ಉತ್ಪನ್ನಗಳು ಲಭ್ಯವಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹ ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೈಂದೂರು ಉತ್ಸವದಲ್ಲಿ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

ಬೈಂದೂರು ಉತ್ಸವದಲ್ಲಿ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ
Date: