Sunday, November 24, 2024
Sunday, November 24, 2024

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಹ ಭಾರತೀಯ ನಾಗರಿಕರಿಗೆ ಅವಕಾಶ: ಜಿಲ್ಲಾಧಿಕಾರಿ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಹ ಭಾರತೀಯ ನಾಗರಿಕರಿಗೆ ಅವಕಾಶ: ಜಿಲ್ಲಾಧಿಕಾರಿ

Date:

ಉಡುಪಿ, ಅ.29: ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಬೈಂದೂರು, ಕುಂದಾಪುರ, ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ವೆಬ್‌ಸೈಟ್ http://www.ceokarnataka.kar.nic.in ಮತ್ತು ಜಿಲ್ಲಾಧಿಕಾರಿಯವರ ಕಚೇರಿಯ ವೆಬ್‌ಸೈಟ್ http://www.udupi.nic.in ನಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದಲ್ಲಿ ನೇಮಕ ಮಾಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆ ಹಾಗೂ ಕ್ಲೇಮ್‌ಗಳನ್ನು ನವೆಂಬರ್ 28 ರ ಒಳಗೆ ಸಲ್ಲಿಸಬಹುದಾಗಿದ್ದು, ಇವುಗಳನ್ನು ಡಿಸೆಂಬರ್ 24 ರಂದು ವಿಲೇವಾರಿ ಮಾಡಲಾಗುವುದು. 2025 ರ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಮತದಾರರ ಪಟ್ಟಿಗೆ 2025 ರ ಜನವರಿ 01, ಏಪ್ರಿಲ್ 01, ಜುಲೈ 01, ಅಕ್ಟೋಬರ್ 01 ಕ್ಕೆ 18 ವರ್ಷ ಪೂರ್ಣಗೊಳಿಸಿರುವ ಅರ್ಹ ಭಾರತೀಯ ನಾಗರಿಕರು ವಯಸ್ಸಿನ ಹಾಗೂ ವಾಸ್ತವ್ಯದ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಿ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದ ಅವರು, ವಿಶೇಷ ಮತದಾರರ ನೋಂದಣಿ ಶಿಬಿರಗಳನ್ನು 2024 ರ ನವೆಂಬರ್ 9, 10, 23 ಹಾಗೂ 24 ರಂದು ಪ್ರತಿಯೊಂದು ಮತಗಟ್ಟೆಗಳಲ್ಲಿ ನಡೆಯಲಿದೆ ಎಂದರು. ಹೊಸ ಮತದಾರರ ಪಟ್ಟಿ ನೋಂದಣಿಗೆ ನಮೂನೆ -6 ರಲ್ಲಿ, ಅನಿವಾಸಿ ಭಾರತೀಯರು 6-ಎ ನಲ್ಲಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು ಅರ್ಜಿ ನಮೂನೆ-7, ಒಂದು ವಿಧಾನಸಬಾ ಕ್ಷೇತ್ರದಿಂದ ವಾಸಸ್ಥಳ ಬದಲಾಯಿಸಲು ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಅರ್ಜಿದಾರರು ಆನ್‌ಲೈನ್ ಮೂಲಕ ವೆಬ್‌ಪೋರ್ಟಲ್ http://www.nvsp.in ಹಾಗೂ ವೋಟರ್ ಹೆಲ್ಪ್ಲೈನ್ ಆಪ್ ನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಹಾಗೂ ತಿದ್ದುಪಡಿಗಳಿಗಾಗಿ ಅವಕಾಶವಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ತೆರೆಯಲಾದ ಜಿಲ್ಲಾ ಮತದಾರರ ಸಹಾಯವಾಣಿ ಉಚಿತ ದೂರವಾಣಿ ಸಂಖ್ಯೆ: 1950 ಅನ್ನು ಸಂಪರ್ಕಿಸಬಹುದಾಗಿದೆ ಎಂದರು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಏನಾದರೂ ಬದಲಾವಣೆಗಳಿದ್ದಲ್ಲಿ ಮತದಾರರು ಸಮೀಪದ ತಾಲೂಕು ಕಚೇರಿಗಳಿಗೆ ಅಥವಾ ವಾಸವಿರುವ ವಿಳಾಸ ವ್ಯಾಪ್ತಿಗೆ ಬರುವ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ರಾಜ್ಯದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಬಿ.ಜೆ.ಪಿ. ಯ ಚಂದ್ರಶೇಖರ ಪ್ರಭು, ಸಿ.ಪಿ.ಐ ನ ಮೋಹನ್ ಜಿ.ಎಂ., ಕಾಂಗ್ರೆಸ್ ನ ಶ್ರೀನಿವಾಸ ಹೆಬ್ಬಾರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!