Tuesday, November 12, 2024
Tuesday, November 12, 2024

ಆನಂದ ಸಿ ಕುಂದರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಆನಂದ ಸಿ ಕುಂದರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Date:

ಕೋಟ, ಅ.31: ಸ.ಹಿ.ಪ್ರಾ ಶಾಲೆ ಮಣೂರು ಪಡುಕರೆ ಇಲ್ಲಿ ಶಾಲಾ ಸಮುದಾಯದತ್ತ ಕಾರ್ಯಕ್ರಮದಲ್ಲಿ 2024 – 25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆಯವರು ಕೊಡಮಾಡಲ್ಪಟ್ಟ ಜಿಲ್ಲಾಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಭಾಜನರಾಗಿರುವ ಶಾಲೆಯ ಮಹಾಪೋಷಕರು ಹಾಗೂ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ರವರನ್ನು ಶಾಲೆಯ ಪರವಾಗಿ ಅಭಿನಂದಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿವೇಕ್ ಗಾಂವ್ಕರ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕುಂದರ್, ಮಾರ್ಗದರ್ಶಿ ಶಿಕ್ಷಕ ಸರ್ವೋತ್ತಮ ನಾಯಕ್, ಶಿಕ್ಷಕರು, ಪೋಷಕರು. ಎಸ್‌ಡಿಎಂಸಿ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಂಜುನಾಥ ಹೊಳ್ಳ ಸ್ವಾಗತಿಸಿ, ಶಿಕ್ಷಕಿ ಲಲಿತಾ ವಂದಿಸಿದರು. ಶಿಕ್ಷಕಿ ನಾಗರತ್ನ ಜಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೋಟೇಶ್ವರದ ಅತಿ ಪ್ರಾಚೀನ‌ ಶಿಲಾ ಶಾಸನ ಪತ್ತೆ

ಉಡುಪಿ, ನ.12: ಕೋಟೇಶ್ವರದ ರಥಬೀದಿಯ ರಸ್ತೆ ದುರಸ್ತಿ ಸಂದರ್ಭದಲ್ಲಿ‌ ಪತ್ತೆಯಾಗಿದ್ದ ಆದರೆ...

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ

ನವದೆಹಲಿ, ನ.11: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51...

ಸುಧಾರಿತ ಟೈಲರಿಂಗ್ ಮತ್ತು ಫ್ಯಾಷನ್ ಬ್ಲೌಸ್ ತರಬೇತಿ

ಉಡುಪಿ, ನ.11: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ವಿಜಯ ಗ್ರಾಮೀಣ ಪ್ರತಿಷ್ಠಾನ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ತೀವ್ರ ರಕ್ತದ ಕೊರತೆ: ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸಿ

ಮಣಿಪಾಲ, ನ.11: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಈ ಪ್ರದೇಶದ ಪ್ರಮುಖ ಆಸ್ಪತ್ರೆಯಾಗಿದ್ದು...
error: Content is protected !!