Sunday, February 23, 2025
Sunday, February 23, 2025

ಉಡುಪಿ: ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಕನ್ನಡ ರಾಜ್ಯೋತ್ಸವ ಆಚರಣೆ

Date:

ಉಡುಪಿ, ನ.1: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 69ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವೈಭವದ ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಭುವನೇಶ್ವರಿ ದೇವಿಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿಆರ್ ಹೆಬ್ಬಾಳಕರ್, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ ಸ್ಥಬ್ದಚಿತ್ರಗಳಲ್ಲಿ ಕರ್ನಾಟಕ ರಾಜ್ಯದ ಕೃಷಿ ಇಲಾಖೆ ಪ್ರಥಮ ಸ್ಥಾನ, ಪ್ರವಾಸೋದ್ಯಮ ಇಲಾಖೆ ದ್ವಿತೀಯ ಸ್ಥಾನ ಹಾಗೂ ತೋಟಗಾರಿಕಾ ಇಲಾಖೆ ತೃತೀಯ ಸ್ಥಾನ ಪಡೆದಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂದ್ರಾಳಿ ಶಾಲೆ ಮೊದಲನೇ ಸ್ಥಾನ, ಸೈಂಟ್ ಸಿಸಿಲಿ ಶಾಲೆ ಎರಡನೇ ಸ್ಥಾನ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೃತೀಯ ಸ್ಥಾನ ತಮ್ಮದಾಗಿಸಿಕೊಂಡಿದೆ.

ಪಥ ಸಂಚಲನದಲ್ಲಿ ವಿವಿಧ ಇಲಾಖೆಯ ಹಾಗೂ ಶಾಲಾ-ಕಾಲೇಜುಗಳ ತುಕಡಿಗಳು ಭಾಗವಹಿಸಿದ್ದು, ಕಾಲೇಜು ವಿಭಾಗದಲ್ಲಿ ಕುಂಜಿಬೆಟ್ಟು ಮಹಾತ್ಮಗಾಂಧಿ ಮೆಮೋರಿಯಲ್ ಕಾಲೇಜು ಮೊದಲನೇ ಸ್ಥಾನ, ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಎರಡನೇ ಸ್ಥಾನ, ಪ್ರೌಢಶಾಲಾ ವಿಭಾಗದಲ್ಲಿ ಆವರ್ಸೆ ಸರಕಾರಿ ಪ್ರೌಢಶಾಲೆ ಪ್ರಥಮ, ಉಡುಪಿಯ ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಹುಡುಗಿಯರು (ಗೈಡ್ಸ್) ದ್ವಿತೀಯ ಸ್ಥಾನ ಹಾಗೂ ಮಣಿಪಾಲ ಎನ್.ಸಿ.ಸಿ ಆರ್ಮಿ ವಿಭಾಗದ ಮಾಧವ ಕೃಪಾ ಪ್ರೌಢಶಾಲೆ ಮೂರನೇ ಸ್ಥಾನ ಪಡೆದಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಂತೆಕಟ್ಟೆ ಕಳ್ತೂರು ಪ್ರಥಮ ಸ್ಥಾನ ಹಾಗೂ ವಳಕಾಡು ಸರಕಾರಿ ಸಂಯುಕ್ತ ಪ್ರಾಥಮಿ ಶಾಲೆ ಎರಡನೇ ಸ್ಥಾನ ಪಡೆದಿದೆ.

ಸಾಧಕ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!