Sunday, January 19, 2025
Sunday, January 19, 2025

‘ಮತ್ಸ್ಯವಾಹಿನಿ’ ವಾಹನ: ಅರ್ಜಿ ಆಹ್ವಾನ

‘ಮತ್ಸ್ಯವಾಹಿನಿ’ ವಾಹನ: ಅರ್ಜಿ ಆಹ್ವಾನ

Date:

ಉಡುಪಿ, ನ.1: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಇ-ತ್ರಿಚಕ್ರ ವಿದ್ಯುತ್ ಚಾಲಿತ ಸುಸಜ್ಜಿತ ಪರಿಸರ ಸ್ನೇಹಿ ಕಿಯಾಸ್ಕ್ ‘ಮತ್ಸ್ಯವಾಹಿನಿ’ ವಾಹನಗಳಲ್ಲಿ ತಾಜಾ ಮೀನು ಮಾರಾಟಕ್ಕೆ ಹಾಗೂ ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಪರವಾನಗಿ ಆಧಾರದಲ್ಲಿ ಪಡೆಯುವ ಬಗ್ಗೆ ಜಿಲ್ಲೆಯ ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದವರಿಗೆ 1 ಲಕ್ಷ ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ವರ್ಗದವರಿಗೆ 50 ಸಾವಿರ ಭದ್ರತಾ ಠೇವಣಿ ನಿಗದಿಪಡಿಸಲಾಗಿದ್ದು, ಆಯ್ಕೆಯಾದ ಪರವಾನಗಿದಾರರಿಗೆ ಪ್ರತಿ ವಾಹನಕ್ಕೆ 3000 ರೂ ಮಾಸಿಕ ಶುಲ್ಕ ನಿಗದಿಪಡಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!