Sunday, January 19, 2025
Sunday, January 19, 2025

ಕನ್ನಡ ಉಳಿಸುವ ಜತೆಗೆ ಪರಿಸರ ಕಾಳಜಿ ಶ್ಲಾಘನೀಯ: ಠಾಣಾಧಿಕಾರಿ ರಾಘವೇಂದ್ರ

ಕನ್ನಡ ಉಳಿಸುವ ಜತೆಗೆ ಪರಿಸರ ಕಾಳಜಿ ಶ್ಲಾಘನೀಯ: ಠಾಣಾಧಿಕಾರಿ ರಾಘವೇಂದ್ರ

Date:

ಕೋಟ, ನ.1: ಕನ್ನಡ ಕಟ್ಟುವ ಕಾಯಕದ ನಡುವೆ ಪರಿಸರ ಉಳಿಸುವ ಪಂಚವರ್ಣ ಸಂಸ್ಥೆ ಕಾರ್ಯವೈಕರಿ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ೨೭ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸಂಘಟನೆಗಳು ಕ್ರೀಯಾಶೀಲತೆಯನ್ನು ಮೈಗೂಡಿಸಿಕೊಂಡಾಗ ಸಾಧನೆಯ ಮಜಲುಗಳನ್ನು ಕಾಣಲು ಸಾಧ್ಯ, ೨೨೯ ವಾರಗಳ ಪರಿಸ ಸಂರಕ್ಷಣೆ ಬರಿ ಮಾತಿನಲ್ಲಿ ಬಣ್ಣಿಸಲು ಸಾಧ್ಯವಿಲ್ಲ ಅದೊಂದು ದೊಡ್ಡ ಸಾಧನೆ ಅಂತಹ ಕೈಂಕರ್ಯದಲ್ಲಿ ತೊಡಗಿಕೊಂಡ ಸಂಘಟನೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ. ಕನ್ನಡ ಭಾಷೆ ಅದರ ಉಳಿವು ರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸೀಮಿತಗೊಳ್ಳದೆ ಮನೆ ಮನಗಳಲ್ಲಿ ನಿತ್ಯನಿರಂತರತೆಯನ್ನು ಕಾಣುವಂತಾಗಲಿ ಎಂದರು. ಕೋಟ ಗ್ರಾ.ಪಂ ಅಧ್ಯಕ್ಷೆ ಜ್ಯೋತಿ ಬಿ.ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಶುಭ ಹಾರೈಸಿದರು. ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪರಿಸರವಾದಿ ಕೋ.ಗಿ.ನಾ,ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಪಂಚವರ್ಣ ಸಂಸ್ಥೆಯ ಗೌರವ ಸಲಹೆಗಾರ ಕೆ.ದಿನೇಶ್ ಗಾಣಿಗ,, ಪಾಂಚಜನ್ಯ ಹೋಮ್ ಪ್ರಾಡೆಕ್ಟ್ ಮಾಲಿಕ ಗೋಪಾಲಕೃಷ್ಣ ಮಯ್ಯ, ಹಂದಟ್ಟು ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಕಾರ್ಯದರ್ಶಿ ಸುಧೀಂದ್ರ ಜೋಗಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು. ಕಾರ್ಯಕ್ರಮದ ನಂತರ ಕನ್ನಡ ವಾಹನ ಶೋಭಾಯಾತ್ರೆಗೆ ಕೋಟ ಠಾಣಾಧಿಕಾರಿ ರಾಘವೇಂದ್ರ ಚಾಲನೆ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!