ಉಡುಪಿ, ನ.1: ಉಡುಪಿ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನವನ್ನು ಕೇಕ್ ಕತ್ತರಿಸುವ ಮೂಲಕ ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು. ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಧ್ವಜಾರೋಹಣ ನೆರವೇರಿಸಿ ಕರ್ನಾಟಕ ರಾಜ್ಯೋತ್ಸದ ಶುಭಾಶಯ ತಿಳಿಸಿದರು. ರಾಘವೇಂದ್ರ ನಾಯಕ್ ಸ್ವಾಗತಿಸಿ ವಂದಿಸಿದರು. ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮುಸ್ತಫಾ ಎ.ಕೆ., ಹರೀಶ್ ಎಮ್.ಜಿ., ಸಂದೀಫ್ ಸಪಾಳ್ಯ, ತಂಝೀಮ್ ಶಿರ್ವ, ಸಿಬ್ಬಂದಿ, ಗ್ರಾಹಕರು ಉಪಸ್ಥಿತರಿದ್ದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
Date: