Sunday, January 19, 2025
Sunday, January 19, 2025

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Date:

ಉಡುಪಿ, ನ.1: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಮೊದಲಾದವರು ಹಾಜರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಪಾಧ್ಯಕ್ಷ ಬಾಲಕೃಷ್ಣ ಉಚ್ಚಿಲ, ಕಾರ್ಯದರ್ಶಿ ರಹೀಂ ಉಜಿರೆ, ಪ್ರಮೋದ್ ಸುವರ್ಣ, ರಾಜೇಶ್ ಅಚ್ಲಾಡಿ, ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ, ಜತೆ ಕಾರ್ಯದರ್ಶಿ ದೀಪಕ್ ಜೈನ್, ಸಂಘದ ಮಾಜಿ ಅಧ್ಯಕ್ಷ ದಿನೇಶ್ ಕಿಣಿ, ಕುಂದಾಪುರ ತಾಲೂಕು ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಹೆಬ್ರಿ ತಾಲೂಕು ಅಧ್ಯಕ್ಷ ಸುಕುಮಾರ್ ಮುನಿಯಾಲು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!