Sunday, January 19, 2025
Sunday, January 19, 2025

ಬೈಂದೂರು ಉತ್ಸವದಲ್ಲಿ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

ಬೈಂದೂರು ಉತ್ಸವದಲ್ಲಿ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Date:

ಬೈಂದೂರು, ನ.1: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ಬೈಂದೂರು ಉತ್ಸವ -2024 ಇದರ ಪ್ರಯುಕ್ತ ಆಯೋಜಿಸಿದ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟೆಹೊಳೆ, ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವವಾಹಕ ಅಧಿಕಾರಿ ಭಾರತಿ ಎನ್ ಹಾಗೂ ಬೈಂದೂರು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಜಿಲ್ಲೆ ಹಾಗೂ ಹೊರ ಜಿಲ್ಲೆಯಿಂದ ಸುಮಾರು 30 ಮಹಿಳಾ ಉದ್ಯಮಿದಾರರು ಈ ಮಾರಾಟ ಮೇಳದಲ್ಲಿ ಭಾಗವಹಿಸಿದ್ದರು. ಈ ಮಾರಾಟ ಮಳಿಗೆಯಲ್ಲಿ ಗ್ರಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಮಣ್ಣಿನ ಹಣತೆ, ಗೋ ಉತ್ಪನ್ನ, ಹೆಬ್ರಿ ಹನಿ, ಗ್ರೂ ಬ್ಯಾಗ್, ಚನ್ನಪಟ್ಟಣ ಗೊಂಬೆ, ವಿವಿಧ ಬಗೆಯ ಉಪ್ಪಿನಕಾಯಿ, ಸಾಂಬಾರ್ ಪೌಡರ್ ಇತ್ಯಾದಿ ಉತ್ಪನ್ನಗಳು ಲಭ್ಯವಿದ್ದವು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!