Saturday, January 18, 2025
Saturday, January 18, 2025

ಸಾಮೂಹಿಕ ಗೋಪೂಜೆ

ಸಾಮೂಹಿಕ ಗೋಪೂಜೆ

Date:

ಕೋಟ, ನ.3: ಗೋವುಗಳಿಗೆ ಭಾರತದಲ್ಲಿ ಮಹತ್ವವಾದ ಸ್ಥಾನ ಹಾಗೂ ಆರಾಧನೆ ನಡೆಯುತ್ತದೆ ಎಂದು ರೋಟರಿ ಕ್ಲಬ್ ಕುಂದಾಪುರ ಅಧ್ಯಕ್ಷ ಲಿಯಾಖಾತ್ ಆಲಿ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮೂಡುಗೋಪಾಡಿ ರಫೀಕ್ ಸಾಹೇಬರ ಹೈನುಗಾರಿಕಾ ಫಾರ್ಮನಲ್ಲಿ ಹಮ್ಮಿಕೊಂಡ ಸಾಮೂಹಿಕ ಗೋ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತೀಯ ಸಂಸ್ಕೃತಿ ವಿಶಿಷ್ಠವಾದದ್ದು ಇಲ್ಲಿ ಎಲ್ಲಾ ವರ್ಗದವರು ಗೋವುಗಳನ್ನು ಪೂಜಿಸುವ ಕ್ರಮಗಳಿಗೆ ಈ ದಿಸೆಯಲ್ಲಿ ಪಂಚವರ್ಣ ಸಂಸ್ಥೆ ಸಾಮರಸ್ಯ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಒಂದು ಸಂಘಟನೆ ಈ ರೀತಿಯಲ್ಲೂ ಕಾರ್ಯನಿರ್ವಹಿಸಬಹುದು ಎಂದು ಸಮಾಜಕ್ಕೆ ತೋರಿಸಲ್ಪಟ್ಟಿದೆ ಎಂದರು.

ಮುಖ್ಯ ಅಭ್ಯಾಗತರಾಗಿ ಗೋ ಪೂಜೆಯನ್ನು ಉದ್ಘಾಟಿಸಿದ ಬಿಜೆಪಿ ಕುಂದಾಪುರ ಕ್ಷೇತ್ರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, ಗೋಮಾತೆಯ ಪೂಜೆ ವರ್ಷಕ್ಕೆ ಸೀಮಿತವಾಗದೆ ವರ್ಷಂಪ್ರತಿ ಗೋ ಆರಾಧನೆ ನಡೆಯುವಂತಾಗಲಿ. ಸಮಾಜಮುಖಿ ಚಿಂತನೆಗಳೊಂದಿಗೆ ಪರಿಸರ ಜಾಗೃತಿಯ ದಾಖಲೆ ನಿರ್ಮಿಸುವ ಪಂಚವರ್ಣ ಸಂಸ್ಥೆಯ ಕಾರ್ಯ ಪ್ರತಿಯೊಂದು ಸಂಘಟನೆಗಳಿಗೆ ಮಾದರಿ ಎಂದರು.
ಕಾರ್ಯಕ್ರಮದಲ್ಲಿ ಪಂಚವರ್ಣ ಮಹಿಳಾ ಮಂಡಲದದ ಸದಸ್ಯರು ಗೋ ಮಾತೆಗೆ ಪೂಜೆ ನೆರವೇರಿಸಿದರು.
ಹೈನುಗಾರಿಕೆಯ ಫಾರ್ಮ್ ಮುಖ್ಯಸ್ಥ ರಫೀಕ್ ಸಾಹೇಬ್ ಗೋವಿನ ಹೆಸರಿನೊಂದಿಗೆ ಗಿಡ ನೆಟ್ಟರು.

ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು. ವಿಪ್ರ ಮಹಿಳಾ ವೇದಿಕೆಯ ಅಧ್ಯಕ್ಷೆ ವನಿತಾ ಉಪಾಧ್ಯ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಕೋಟ, ಫಾರ್ಮ್ ಪ್ರಮುಖರಾದ ಹನೀಫ್ ಸಾಹೇಬ್ ಮತ್ತಿತರರು ಇದ್ದರು. ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚವರ್ಣ ಯುವಕ ಮಂಡಲದ ಸದಸ್ಯ ಕಾರ್ತಿಕ್ ಎನ್ ಸ್ವಾಗತಿಸಿ, ಸಂಚಾಲಕಿ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!