Saturday, November 23, 2024
Saturday, November 23, 2024

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಕನ್ನಡ ಗೀತಾ ಗಾಯನ 

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಕನ್ನಡ ಗೀತಾ ಗಾಯನ 

Date:

ಬೆಳ್ಮಣ್, ನ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ, ಕನ್ನಡ ಗೀತಾ ಗಾಯನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕನ್ನಡ ಮಾತೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ ಪುಷ್ಪರ್ಚನೆಗೈದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹಾಗೂ ನಿಕಟ ಪೂರ್ವಾಧ್ಯಕ್ಷರಾದ ಪ್ರಶಾಂತ್ ಪೂಜಾರಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದರು.

ಪೂರ್ವಾಧ್ಯಕ್ಷರುಗಳಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಉದಯ ಅಂಚನ್, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಜೊತೆ ಕಾರ್ಯದರ್ಶಿ ಅನ್ನಪೂರ್ಣ ಕಾಮತ್, ಸದಸ್ಯರಾದ ಹರೀಶ್ ಪೂಜಾರಿ, ಸುದರ್ಶನ್ ಕುಂದರ್, ಸುರೇಶ್ ಅಬ್ಬನಡ್ಕ, ಪ್ರದೀಪ್ ಸುವರ್ಣ, ಕಿರಣ್ ಶೆಟ್ಟಿ, ಕೀರ್ತನ್ ಪೂಜಾರಿ, ಯೋಗೀಶ್ ಆಚಾರ್ಯ, ಶಾಂತರಾಮ್ ಕುಲಾಲ್, ಲಲಿತಾ ಆಚಾರ್ಯ, ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ, ವೀಣಾ ಆಚಾರ್ಯ, ಸುಲೋಚನಾ ಕೋಟ್ಯಾನ್, ಪುಷ್ಪ ಕುಲಾಲ್, ಹರಿಣಿ ಪೂಜಾರಿ ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...
error: Content is protected !!