ಕಾಪು, ನ.3: ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ (ರಿ.) ಬೆಂಗಳೂರು ಇದರ ಉಡುಪಿ ಜಿಲ್ಲಾ ಘಟಕದ 3ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ನಡೆಯಿತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ (ರಿ.) ಬೆಂಗಳೂರು ಇದರ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀಧರ್ ಮಣಿಪುರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.
ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ: ಉಡುಪಿ ಜಿಲ್ಲಾ ಘಟಕದ 3ನೇ ವಾರ್ಷಿಕೋತ್ಸವ

ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ: ಉಡುಪಿ ಜಿಲ್ಲಾ ಘಟಕದ 3ನೇ ವಾರ್ಷಿಕೋತ್ಸವ
Date: