Tuesday, February 25, 2025
Tuesday, February 25, 2025

ತೆಂಕನಿಡಿಯೂರು ಕಾಲೇಜಿನ ನೂತನ ಪ್ರಾಂಶುಪಾಲರಾಗಿ ನಿತ್ಯಾನಂದ ವಿ ಗಾಂವಕರ ಅಧಿಕಾರ ಸ್ವೀಕಾರ

ತೆಂಕನಿಡಿಯೂರು ಕಾಲೇಜಿನ ನೂತನ ಪ್ರಾಂಶುಪಾಲರಾಗಿ ನಿತ್ಯಾನಂದ ವಿ ಗಾಂವಕರ ಅಧಿಕಾರ ಸ್ವೀಕಾರ

Date:

ತೆಂಕನಿಡಿಯೂರು, ನ.4: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇದರ ನೂತನ ಪ್ರಾಂಶುಪಾಲರಾಗಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ನಿತ್ಯಾನಂದ ವಿ ಗಾಂವಕರ ಇವರು ದಿನಾಂಕ 28/10/2024 ರಂದು ಅಧಿಕಾರ ಸ್ವೀಕರಿಸಿದರು. ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ನಿತ್ಯಾನಂದ ವಿ ಗಾಂವಕರ ಅವರು 32 ವರ್ಷಗಳ ಸೇವಾ ಅವಧಿಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುತ್ತಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ಎನ್ ಎಸ್ ಎಸ್ ನೋಡಲ್ ಅಧಿಕಾರಿಯಾಗಿ 3 ವರ್ಷಗಳ ಕಾಲ ಕಾರ್ಯ ನಿರ್ವಹಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!