Home ಸುದ್ಧಿಗಳು ಪ್ರಾದೇಶಿಕ ಉಡುಪಿ ಜಿಲ್ಲೆಯಲ್ಲಿ ಎ. 20 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಉಡುಪಿ ಜಿಲ್ಲೆಯಲ್ಲಿ ಎ. 20 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

441
0

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್ 4 ರ ಬೆಳಗ್ಗೆ 6 ಗಂಟೆಯಿಂದ ಎಪ್ರಿಲ್ 20 ರ ಸಂಜೆ 6 ಗಂಟೆಯವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.