Monday, February 24, 2025
Monday, February 24, 2025

ಮಕ್ಕಳಿಗಾಗಿ ವಿವಿಧ ಸ್ಪರ್ಧೆ

ಮಕ್ಕಳಿಗಾಗಿ ವಿವಿಧ ಸ್ಪರ್ಧೆ

Date:

ಉಡುಪಿ, ನ.4: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ನವೆಂಬರ್ 7 ರಂದು ಬೆಳಗ್ಗೆ 10 ಗಂಟೆಯಿಂದ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಸ್ಫರ್ಧೆಗಳಲ್ಲಿ ವಿಜೇತರಾದ ಮಕ್ಕಳು ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು ಇಲ್ಲಿ ನಡೆಯುವ ರಾಜ್ಯ ಮಟ್ಟದ ‘ಕಲಾಶ್ರೀ’ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಸ್ಪರ್ಧೆಯ ವಿವರ: ಸೃಜನಾತ್ಮಕ ಪ್ರದರ್ಶನ ಕಲೆ: ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದು ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ(ವೈಯಕ್ತಿಕ), ವಿಜ್ಞಾನದಲ್ಲಿ ನೂತನ ಆವಿಷ್ಕಾರ: ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ. ಸೃಜನಾತ್ಮಕ ಕಲೆ: ಚಿತ್ರಕಲಾ ಸ್ಫರ್ಧೆ. ವಾದ್ಯ ಸಂಗೀತ: ತಬಲಾ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು, ಮತ್ತು ನಗಾರಿ ಹಾಗೂ ಅಂಗವಿಕಲ, ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ (ಯಾವುದೇ ಪ್ರಕಾರ). ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!