ಉಡುಪಿ, ನ.5: ಕಾಪು ಪುರಸಭೆ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ‍್ಸ್ ಹಾಗೂ ಅನೈರ್ಮಲ್ಯ ಶೌಚಾಲಯಗಳ ಕುರಿತು ಸಮೀಕ್ಷೆಯನ್ನು ಅಕ್ಟೋಬರ್ 24 ರಿಂದ ಅಕ್ಟೋಬರ್ 30ರ ವರೆಗೆ ನಡೆಸಲಾಗಿದ್ದು, ಈ ಸಮಯದಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಹಾಗೂ ಅನೈರ್ಮಲ್ಯ ಶೌಚಾಲಯ ಕಂಡುಬರುವುದಿಲ್ಲ. ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಮಾಡುತ್ತಿರುವ ಬಗ್ಗೆ ಯಾರು ನೋಂದಾಯಿಸಿರುವುದಿಲ್ಲ. ಈ ಕುರಿತು ಯಾವುದೇ ಆಕ್ಷೇಪಣೆ ಇದ್ದಲ್ಲಿ ಸಾರ್ವಜನಿಕರು ಲಿಖಿತವಾಗಿ ಅಥವಾ ಖುದ್ದಾಗಿ ಕಛೇರಿಗೆ ನವೆಂಬರ್ 15 ರ ಒಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಕಾಪು ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮ್ಯಾನ್ಯುವಲ್ ಸ್ಕ್ಯಾವೆಂಜರ್: ಆಕ್ಷೇಪಣೆ ಆಹ್ವಾನ

ಮ್ಯಾನ್ಯುವಲ್ ಸ್ಕ್ಯಾವೆಂಜರ್: ಆಕ್ಷೇಪಣೆ ಆಹ್ವಾನ
Date: