Sunday, January 19, 2025
Sunday, January 19, 2025

ನ:7 ರಿಂದ ತಾಲೂಕುಗಳಲ್ಲಿ ಪೌತಿ ಆಂದೋಲನ

ನ:7 ರಿಂದ ತಾಲೂಕುಗಳಲ್ಲಿ ಪೌತಿ ಆಂದೋಲನ

Date:

ಉಡುಪಿ, ನ.5: ಪಹಣಿ ಆಧಾರ್ ಜೋಡಣೆ ಕಾರ್ಯವು ಜಿಲ್ಲೆಯಲ್ಲಿ ಪ್ರಗತಿಯಲ್ಲಿದ್ದು, ಸದರಿ ಪ್ರಕ್ರಿಯೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಖಾತಾದಾರರು ಮರಣ ಹೊಂದಿರುವ ಕುರಿತು ತಂತ್ರಾಂಶದಲ್ಲಿ ನಮೂದಿಸಿದ್ದು, ಇಂತಹ ಪ್ರಕರಣಗಳಲ್ಲಿ ಪೌತಿ ಅಥವಾ ವಾರೀಸು ಖಾತೆ ಅಂದೋಲನವನ್ನು ಉಡುಪಿ ತಾಲೂಕಿನಲ್ಲಿ ನವೆಂಬರ್ 7 ರಂದು, ಕುಂದಾಪುರ ತಾಲೂಕಿನಲ್ಲಿ ನವೆಂಬರ್ 8 ರಂದು, ಕಾರ್ಕಳ ತಾಲೂಕಿನಲ್ಲಿ ನವೆಂಬರ್ 11 ರಂದು, ಬ್ರಹ್ಮಾವರ ತಾಲೂಕಿನಲ್ಲಿ ನವೆಂಬರ್ 12 ರಂದು, ಬೈಂದೂರು ತಾಲೂಕಿನಲ್ಲಿ ನವೆಂಬರ್ 13 ರಂದು, ಕಾಪು ತಾಲೂಕಿನಲ್ಲಿ ನವೆಂಬರ್ 14 ರಂದು ಹಾಗೂ ಹೆಬ್ರಿ ತಾಲೂಕಿನಲ್ಲಿ ನವೆಂಬರ್ 15 ರಂದು ಆಯಾಯ ತಾಲೂಕಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಪೌತಿ/ ವಾರೀಸು ಖಾತೆ ಮಾಡಲು ಬಾಕಿ ಇರುವ ಜಮೀನಿನ ವಾರೀಸುದಾರರು ಆಯಾಯ ತಾಲ್ಲೂಕು ಕಛೇರಿ ಅಥವಾ ತಮ್ಮ ಗ್ರಾಮದ ಗ್ರಾಮ ಆಡಳಿತ ಅಧಿಕಾರಿಗಳನ್ನು ತಕ್ಷಣವೇ ಸಂಪರ್ಕಿಸಿ ಮಾಹಿತಿಯನ್ನು ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಪೌತಿ ಅಂದೋಲನದಲ್ಲಿ ಭಾಗವಹಿಸುವಂತೆ ಹಾಗೂ ಈ ಪೌತಿ ಅಂದೋಲನದಡಿ ಜಮೀನಿನ ದಾಖಲೆಗಳನ್ನು ಪಹಣಿಯಲ್ಲಿ ಇಂಧೀಕರಿಸಲು ಕ್ರಮ ಕೈಗೊಳ್ಳುಲಾಗುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!