Thursday, November 19, 2026
Thursday, November 19, 2026

ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ವೇಳಾಪಟ್ಟಿ ಪ್ರಕಟ

Date:

ಉಡುಪಿ, ನ.5: ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ 35- ಅಮಾಸೆಬೈಲು ಗ್ರಾಮ ಪಂಚಾಯತಿಯ 1 ಸ್ಥಾನ, ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮ ಪಂಚಾಯತಿಯ 1 ಸ್ಥಾನ, ಉಡುಪಿ ತಾಲೂಕಿನ ಬೊಮ್ಮರ ಬೆಟ್ಟು ಗ್ರಾಮ ಪಂಚಾಯತಿಯ 1 ಸ್ಥಾನ, 13-ಕೊಡಿಬೆಟ್ಟು ಗ್ರಾಮ ಪಂಚಾಯತಿಯ 1 ಸ್ಥಾನ, ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯತಿಯ 1 sಸ್ಥಾನ, ನಲ್ಲೂರು ಗ್ರಾಮ ಪಂಚಾಯತಿಯ 1 ಸ್ಥಾನ, ನಿಟ್ಟೆ ಗ್ರಾಮ ಪಂಚಾಯತಿಯ 1 ಸ್ಥಾನ, ನೀರೆ ಗ್ರಾಮ ಪಂಚಾಯತಿಯ 3 ಸ್ಥಾನ, 5-ಕೆರ್ವಾಶೆ ಗ್ರಾಮ ಪಂಚಾಯತಿಯ 1 ಸ್ಥಾನ ಹಾಗೂ ಕಡ್ತಲ ಗ್ರಾಮ ಪಂಚಾಯತಿಯ 1 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗ ಆದೇಶಸಿದೆ.

ನಾಮಪತ್ರ ಸಲ್ಲಿಸಲು 2024 ರ ನವೆಂಬರ್ 6 ರಿಂದ ಪ್ರಾರಂಭವಾಗಲಿದ್ದು, ನವೆಂಬರ್ 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ನವೆಂಬರ್ 13 ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದೆ. ನವೆಂಬರ್ 15 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ನವೆಂಬರ್ 23ರ ಶನಿವಾರದಂದು ಮತದಾನವು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ ಮರು ಮತದಾನವನ್ನು ನವೆಂಬರ್ 25 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮತ ಎಣಿಕೆಯು ನವೆಂಬರ್ 26 ರಂದು ಬೆಳಗ್ಗೆ 8 ಗಂಟೆಯಿಂದ ತಾಲ್ಲೂಕಿನ ಕೇಂದ್ರ ಸ್ಥಳಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...
error: Content is protected !!