Monday, February 24, 2025
Monday, February 24, 2025

ತಾಲೂಕು ಮಟ್ಟದ ಪಿಂಚಣಿ ಅದಾಲತ್

ತಾಲೂಕು ಮಟ್ಟದ ಪಿಂಚಣಿ ಅದಾಲತ್

Date:

ಉಡುಪಿ, ನ.5: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ಉದ್ದೇಶದಿಂದ ಕುಂದಾಪುರ ಉಪವಿಭಾಗದ ಸಹಾಯಕ ಕಮೀಷನರ್ ಕೆ.ಮಹೇಶ್ ಚಂದ್ರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಿಂಚಣಿ ಅದಾಲತ್ ನವೆಂಬರ್ 7 ರಂದು ಅಪರಾಹ್ನ 4 ಗಂಟೆಗೆ ನಗರದ ಬನ್ನಂಜೆಯ ತಾಲೂಕು ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆಯಲಿದೆ. ಪಿಂಚಣಿ ಅದಾಲತ್‌ನ್ನು ಉಡುಪಿ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟ ಪಿಂಚಣಿ ಸೌಲಭ್ಯ ಪಡೆಯಲಿಚ್ಚಿಸುವವರು, ಈಗಾಗಲೇ ಅರ್ಜಿ ಸಲ್ಲಿಸಿ ಕೋರಿಕೆ ತಿರಸ್ಕೃತಗೊಂಡಿರುವವರು, ಈಗಾಗಲೇ ಮಂಜೂರಾಗಿ ಹಣ ಪಾವತಿಯಾಗದೇ ಇರುವವರು ಹಾಗೂ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ದೂರುಗಳಿದ್ದಲ್ಲಿ ಸದ್ರಿ ಅದಾಲತ್‌ಗೆ ಹಾಜರಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಉಡುಪಿ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!