Sunday, January 19, 2025
Sunday, January 19, 2025

ಬಜೆ ಡ್ಯಾಂ: ನಿಲಿಸುಗಲ್ಲು ಪತ್ತೆ

ಬಜೆ ಡ್ಯಾಂ: ನಿಲಿಸುಗಲ್ಲು ಪತ್ತೆ

Date:

ಉಡುಪಿ, ನ.6: ಹಿರಿಯಡ್ಕ-ಕುಕ್ಕೆಹಳ್ಳಿ ಮಾರ್ಗದಲ್ಲಿರುವ ಸುವರ್ಣ ನದಿಗೆ ಕಟ್ಟಿರುವ ಬಜೆ ಡ್ಯಾಂ (ಕಿರು ಅಣೆಕಟ್ಟು) ಬಳಿ ಬೃಹತ್ ಶಿಲಾಯುಗಕ್ಕೆ ಸೇರುವ ನಿಲಿಸುಗಲ್ಲನ್ನು ಉದಯವಾಣಿ ಪತ್ರಿಕಾ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಗಣೇಶ್ ನಾಯ್ಕ್ ಚೇರ್ಕಾಡಿ ಮತ್ತು ಸರಕಾರಿ ಪ್ರೌಢಶಾಲೆ-ನಿಡ್ಲೆ ಇಲ್ಲಿನ ಹಿಂದಿ ಅಧ್ಯಾಪಕರಾದ ಗೀತೇಶ್ ಅವರು ಪತ್ತೆ ಮಾಡಿರುತ್ತಾರೆ. ಭೂ ಮೇಲ್ಮೈಯಿಂದ ಸುಮಾರು 6 ಅಡಿ ಎತ್ತರಯಿರುವ ಈ ಕಲ್ಲನ್ನು ಸ್ಥಳೀಯರು “ಗಡಿಕಲ್ಲು” ಎಂದು ಕರೆಯುತ್ತಾರೆ. ಈ ಮೊದಲು ಕ್ಷೇತ್ರಕಾರ್ಯವನ್ನು ಕೈಗೊಂಡಿರುವ ಯು. ಕಮಲಾಬಾಯಿ ಪ್ರೌಢಶಾಲೆಯ ನಿವೃತ್ತ ಅಧ್ಯಾಪಕ ಕೆ. ಶ್ರೀಧರ್ ಭಟ್ ಅವರು ಬೃಹತ್ ಶಿಲಾಯುಗಕ್ಕೆ ಸೇರಿದ ಅನೇಕ ಗುಹಾಸಮಾಧಿಗಳನ್ನು ಮತ್ತು ಸೂಕ್ಷ್ಮ ಶಿಲಾಯುಗ, ನೂತನ ಶಿಲಾಯುಗದ ಅವಶೇಷಗಳನ್ನು ಇಲ್ಲಿ ಪತ್ತೆ ಮಾಡಿದ್ದರು. ಆದರೆ ಪ್ರಸ್ತುತ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಇಂತಹ ಅನೇಕ ಪ್ರಾಗೈತಿಹಾಸಿಕ ಅವಶೇಷಗಳು ನಾಶವಾಗಿರುವ ಸಾಧ್ಯತೆಯಿದೆ. ಈಗ ಗುರುತಿಸಿರುವ ಈ ನಿಲಿಸುಗಲ್ಲು ಸುಮಾರು 2000 ವರ್ಷಗಳಷ್ಟು ಪ್ರಾಚೀನವೆಂದು ಅಂದಾಜಿಸಬಹುದೆಂದು ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ-ಕುಕ್ಕೆಸುಬ್ರಹ್ಮಣ್ಯ ಇಲ್ಲಿನ ಉಪನಿರ್ದೇಶಕ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!