Sunday, January 19, 2025
Sunday, January 19, 2025

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ

Date:

ಉಡುಪಿ, ನ.6: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2024 ಅಂಗವಾಗಿ ಇಂದು ಅಜ್ಜರಕಾಡುವಿನ ನಗರ ಕೇಂದ್ರ ಗ್ರಂಥಾಲಯದ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಜರಗಿತು. ಮುಖ್ಯ ಶಾಖಾ ಗ್ರಂಥಾಲಯದ ಸ್ಫರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಕ್ಕಳಿಗೆ ಪಠ್ಯ ಪುಸ್ತಕಗಳೊಂದಿಗೆ ಪಠ್ಯೇತರ ಪುಸ್ತಕಗಳನ್ನು ಓದುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಗ್ರಂಥಾಲಯದಲ್ಲಿ ಇಂತಹ ಚಟುವಟಿಕೆಗಳನ್ನು ಏರ್ಪಡಿಸಿರುವುದು ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳ ಕುರಿತು ಆಸಕ್ತಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದರು. ಸಾಹಿತಿ ಹಾಗೂ ಶಾರದ ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲ ಜಾನ್‌ಸನ್ ಮಾತನಾಡಿ, ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ವಿದ್ಯಾರ್ಥಿಗಳು ಪುಸ್ತಕದ ಜೊತೆ ಗೆಳೆತನ ಮಾಡಬೇಕು ಓದುವ ಹವ್ಯಾಸವನ್ನು ಮಕ್ಕಳು ರೂಡಿಸಿಕೊಳ್ಳಬೇಕು ಎಂದರು. ಗಿರಿಜಾ ಹೆಗ್ಡೆ ಗಾವಂಕರ್ ಮಾತನಾಡಿ, ಬಾಲ್ಯದಿಂದಲೇ ಮಕ್ಕಳು ಕಥೆಗಳನ್ನು ಓದಬೇಕು ಮುಂದೆ ಓದುವ ಹವ್ಯಾಸದಿಂದ ಕಥೆಗಳನ್ನು ಬರೆಯುವಂತಹ ಪ್ರವೃತ್ತಿ ಬೆಳೆಯುತ್ತದೆ ಜ್ಙಾನ ದೇಗುಲವಾಗಿರುವ ಈ ಗ್ರಂಥಾಲಯವು ಮುಂದಿನ ಭವಿ಼ಷ್ಯ ರೂಪಿಸಲು ವೇದಿಕೆಯಾಗಿದೆ ಎಂದರು.

ಸುಮಾರು 75 ಕ್ಕಿಂತ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ. ಗ್ರಂಥಪಾಲಕಿ ರಂಜಿತ ಸಿ ನಿರೂಪಿಸಿ, ಪ್ರಥಮ ದರ್ಜೆ ಸಹಾಯಕಿ ಶಕುಂತಳಾ ಕುಂದರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!