Monday, February 24, 2025
Monday, February 24, 2025

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಭಜಕೆರೆ ಕೆಸರ್ದ್ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಭಜಕೆರೆ ಕೆಸರ್ದ್ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಬೆಳ್ಮಣ್, ನ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ರಜತ ಸಂಭ್ರಮಾಚರಣೆ ಅಂಗವಾಗಿ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಕಾರ್ಕಳ ತಾಲೂಕು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಕಾರ್ಕಳ ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಬೆಳ್ಮಣ್ಣು ವಲಯದ ಸಮಸ್ತ ಭಜನಾ ಮಂಡಳಿಗಳ ಸಹಯೋಗದೊಂದಿಗೆ ಭಜಕೆರೆ ಗಮ್ಮತ್ತ್ದ ‘ಕೆಸರ್ದ್ ಗೊಬ್ಬು – 2024’ ನವೆಂಬರ್ 17 ರಂದು ಆದಿತ್ಯವಾರ ನಂದಳಿಕೆಯ ಕುಡುಂದೂರಿನ ಬೆರಣಗುಡ್ಡೆಯ ಗದ್ದೆಯಲ್ಲಿ ಜರಗಲಿದೆ.

ಆಮಂತ್ರಣ ಪತ್ರಿಕೆಯನ್ನು ನಂದಳಿಕೆ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ತುಕಾರಾಮ ಶೆಟ್ಟಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ಮಣ್ಣು ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜಯಂತ್ ರಾವ್ ಪಿ, ನಂದಳಿಕೆ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಪ್ರಧಾನ ಅರ್ಚಕರಾದ ಮಧುಸೂಧನ ಭಟ್, ಕಾರ್ಕಳ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ಶ್ರೀಕಾಂತ್ ಪ್ರಭು, ಬೆಳ್ಮಣ್ಣು ವಲಯ ಭಜನಾ ಪರಿಷತ್ತಿನ ವಲಯಾಧ್ಯಕ್ಷರಾದ ಸಚಿತ್ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಕಾರ್ಯಕ್ರಮ ನಿರ್ದೇಶಕ ಸತೀಶ್ ಪೂಜಾರಿ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಗೌರವಾಧ್ಯಕ್ಷ ರಾಜೇಶ್ ಕೋಟ್ಯಾನ್, ಅಧ್ಯಕ್ಷೆ ಸುಲೋಚನಾ ಕೋಟ್ಯಾನ್ ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!