Wednesday, July 29, 2026
Wednesday, July 29, 2026

ಮೆಸ್ಕಾಂ ವತಿಯಿಂದ ಕಂಬ ಹತ್ತಿ ಇಳಿಯುವ ಉಚಿತ ತರಬೇತಿ

ಮೆಸ್ಕಾಂ ವತಿಯಿಂದ ಕಂಬ ಹತ್ತಿ ಇಳಿಯುವ ಉಚಿತ ತರಬೇತಿ

Date:

ಉಡುಪಿ, ನ.7: ಕ.ವಿ.ಪ್ರ.ನಿ.ನಿ ಯಿಂದ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಕಿರಿಯ ಪವರ್‌ಮೆನ್ ನೇಮಕಾತಿ ಸಂಬಂಧ ಸರಕಾರವು ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಮೆಸ್ಕಾಂ ಉಡುಪಿ ವಿಭಾಗದ ವತಿಯಿಂದ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಕಂಬ ಹತ್ತಿ ಇಳಿಯುವ ಉಚಿತ ತರಬೇತಿಯನ್ನು ನವೆಂಬರ್ 14 ರಿಂದ 16 ರ ವರೆಗೆ ನಗರದ ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜು ಕ್ರೀಡಾಂಗಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರ ವರೆಗೆ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ಭಾವಚಿತ್ರ ಇರುವ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿಯ ಪ್ರತಿ ಹಾಗೂ ಕಂಬ ಹತ್ತಿ ಇಳಿಯಲು ಸೂಕ್ತ ಉಡುಪಿನೊಂದಿಗೆ ಹಾಜರಾಗಬೇಕು. ನೇಮಕಾತಿಯು ಅಭ್ಯರ್ಥಿಯ ಅಂಕ ಮತ್ತು ದೈಹಿಕ ಸಾಮರ್ಥ್ಯದ ಮೇಲೆ ಅವಲಂಭಿತವಾಗಿದ್ದು, ತರಬೇತಿ ಅವಧಿಯಲ್ಲಿ ಯಾವುದೇ ಉಚಿತ ಸೌಲಭ್ಯಗಳು ಇರುವುದಿಲ್ಲ ಹಾಗೂ ತರಬೇತಿಯು ನೇಮಕಾತಿಯ ಭಾಗವಾಗಿರುವುದಿಲ್ಲ ಎಂದು ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!