Sunday, January 19, 2025
Sunday, January 19, 2025

ಮಕ್ಕಳ ಮಾರಾಟ ಶಿಕ್ಷಾರ್ಹ ಅಪರಾಧ

ಮಕ್ಕಳ ಮಾರಾಟ ಶಿಕ್ಷಾರ್ಹ ಅಪರಾಧ

Date:

ಉಡುಪಿ, ನ.8: ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯಿದೆ 2015 ರ ಸೆಕ್ಷನ್ 80 ಮತ್ತು 81 ರ ಅನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1.00 ಲಕ್ಷ ರೂ ದಂಡ ವಿಧಿಸಲಾಗುವುದು. ಇಂತಹ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿಯು 3 ವರ್ಷಗಳವರೆಗೆ ಕಡಿಮೆ ಇಲ್ಲದಂತೆ 7 ವರ್ಷಗಳ ವರೆಗೆ ವಿಸ್ತರಣೆಗೆ ಅವಕಾಶ ಇರುತ್ತದೆ. ಈ ಸಂಬಂಧ ಮಕ್ಕಳಾ ರಕ್ಷಣಾ ಘಟಕದ ವತಿಯಿಂದ ನವೆಂಬರ್ ತಿಂಗಳಲ್ಲಿ ಕಾನೂನು ಬದ್ಧ ದತ್ತು ಪ್ರಕ್ರಿಯೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ದತ್ತು ಮಾಸಾಚರಣೆ ಆಚರಿಸಲಾಗುತ್ತಿದ್ದು, ಮಕ್ಕಳ ಮಾರಾಟ ಅಪರಾಧದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಯಾವುದೇ ಅನಾಥ ಪರಿತ್ಯಜಿಸಲ್ಪಟ್ಟ ಅಥವಾ ಒಪ್ಪಿಸಲ್ಪಟ್ಟ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯವರು ದತ್ತು ಮುಕ್ತ ಎಂದು ಘೋಷಿಸಿ ಆದೇಶ ನೀಡಿದ ನಂತರ ಆಂತಹ ಮಕ್ಕಳು ದತ್ತುಗೆ ಅರ್ಹರಾಗಿರುತ್ತಾರೆ. ದತ್ತು ಪಡೆಯಲು ಇಚ್ಚಿಸುವವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಧೃಡರಾಗಿರಬೇಕು ಮತ್ತು ಆರ್ಥಿಕವಾಗಿ ಮಗುವನ್ನು ಸಾಕುವ ಸಾಮರ್ಥ್ಯ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಕೃಷ್ಣಾನುಗೃಹ ದತ್ತು ಕೇಂದ್ರ, ಶ್ರೀಕೃಷ್ಣ ಚಾರಿಟೇಬಲ್ ಟ್ರಸ್ಟ್, ವಸುಂದರಾನಗರ, ಆಶೀರ್ವಾದ್ ರಸ್ತೆ, ಸಂತೆಕಟ್ಟೆ, ಉಡುಪಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!