ಉಡುಪಿ, ನ.8: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ಉದ್ದೇಶದಿಂದ ಕುಂದಾಪುರ ಉಪವಿಭಾಗದ ಸಹಾಯಕ ಕಮೀಷನರ್ ಕೆ.ಮಹೇಶ್ ಚಂದ್ರ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವು ನವೆಂಬರ್ 11 ರಂದು ಬೆಳಗ್ಗೆ 10.30ಕ್ಕೆ ಕಾರ್ಕಳ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಲಿದೆ. ಪಿಂಚಣಿ ಅದಾಲತ್ ನಲ್ಲಿ ಕಾರ್ಕಳ ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟ ಪಿಂಚಣಿ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿ ಕೋರಿಕೆ ತಿರಸ್ಕೃತಗೊಂಡಿರುವವರು, ಪಿಂಚಣಿ ಪಾವತಿಯಾಗದೇ ಇರುವವರು ಹಾಗೂ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ದೂರುಗಳು ಇದ್ದಲ್ಲಿ ಫಲಾನುಭವಿಗಳು ಸದ್ರಿ ಅದಾಲತ್‌ಗೆ ಹಾಜರಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಕಾರ್ಕಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
ಕಾರ್ಕಳ ತಾಲೂಕು ಮಟ್ಟದ ಪಿಂಚಣಿ ಅದಾಲತ್
ಕಾರ್ಕಳ ತಾಲೂಕು ಮಟ್ಟದ ಪಿಂಚಣಿ ಅದಾಲತ್
Date: