Monday, February 24, 2025
Monday, February 24, 2025

ಗ್ರಾಮ ಪಂಚಾಯತ್ ಉಪಚುನಾವಣೆ: ವೇತನ ಸಹಿತ ರಜೆ

ಗ್ರಾಮ ಪಂಚಾಯತ್ ಉಪಚುನಾವಣೆ: ವೇತನ ಸಹಿತ ರಜೆ

Date:

ಉಡುಪಿ, ನ.8: ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳ ಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23 ರಂದು ಮತದಾನ ನಿಗಧಿಪಡಿಸಿದ್ದು, ಯಾವುದೇ ಅರ್ಹ ಮತದಾರರು ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆನ್ನುವುದು ಆಯೋಗದ ಧ್ಯೇಯೋದ್ದೇಶವಾಗಿರುತ್ತದೆ. ಈ ಹಿನ್ನೆಲೆ, ಮತದಾನ ನಡೆಯಲಿರುವ ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು, ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮತದಾನ ದಿನದಂದು ಮತದಾನ ಮಾಡಲು ಅನುಕೂಲವಾಗುವಂತೆ ತಮ್ಮ ಆ ದಿನದ ಎಲ್ಲಾ ಸಂಘ-ಸಂಸ್ಥೆ, ವ್ಯಾಪಾರ, ವಾಣಿಜ್ಯ ಉದ್ದಿಮೆಗಳಿಗೆ, ಕೈಗಾರಿಕಾ ಘಟಕಗಳಿಗೆ ಹಾಗೂ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುವ ಕಾರ್ಮಿಕ ಸಿಬ್ಬಂದಿಗಳಿಗೆ ಮತದಾನ ದಿನದಂದು ವೇತನ ಸಹಿತ ರಜೆಯನ್ನು ಘೋಷಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!