ಉಡುಪಿ, ನ.8: ಕೇಂದ್ರ ಸರಕಾರವು ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಸಾಮಾನ್ಯ ದರ 2300 ರೂ. ಹಾಗೂ ಭತ್ತ ಗ್ರೇಡ್ ಎ ವಿಧಕ್ಕೆ ದರ 2320 ರೂ. ರಂತೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರಿಂದ ಭತ್ತವನ್ನು ನಿಯಮಾನುಸಾರ ಖರೀದಿಸಲು ಮತ್ತು ರೈತರಿಗೆ ನೊಂದಣಿ ಕೇಂದ್ರಗಳನ್ನು ತೆರೆದು ನೊಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಭತ್ತವನ್ನು ಖರೀದಿಸಲು ಕರ್ನಾಟಕ ಆಹಾರ ನಿಗಮ ನಿಯಮಿತವನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದ್ದು, ಸದರಿ ಖರೀದಿ ಏಜೆನ್ಸಿಯವರು ರೈತರಿಂದ ಭತ್ತದ ನೊಂದಣಿ ಪ್ರಕ್ರಿಯೆಯನ್ನು ನವೆಂಬರ್ 15 ರಿಂದ ಡಿಸೆಂಬರ್ 31 ರವರೆಗೆ ರೈತರ ನೊಂದಣಿ ಕಾರ್ಯಗಳನ್ನು ಹಾಗೂ 2025 ರ ಜನವರಿ 1 ರಿಂದ ಮಾರ್ಚ್ 31 ರ ಅವಧಿಯೊಳಗೆ ರೈತರಿಂದ ಭತ್ತವನ್ನು ಖರೀದಿಸುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು. ಉಡುಪಿ ಎ.ಪಿ.ಎಂ.ಸಿ ಯಾರ್ಡ್ನ ಕೆ.ಎಫ್.ಸಿ.ಎಸ್.ಸಿ ಗೋದಾಮು, ಕುಂದಾಪುರ ಕೋಟೇಶ್ವರದ ಕೆ.ಎಫ್.ಸಿ.ಎಸ್.ಸಿ ಗೋದಾಮು ಹಾಗೂ ಕಾರ್ಕಳ ಎ.ಪಿ.ಎಂ.ಸಿ ಯಾರ್ಡ್ನ ಕೆ.ಎಫ್.ಸಿ.ಎಸ್.ಸಿ ಗೋದಾಮು ಇಲ್ಲಿ ಭತ್ತದ ನೊಂದಣಿ/ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಜಿಲ್ಲೆಯಲ್ಲಿ ಭತ್ತ ಬೆಳೆದಿರುವ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ದತ್ತಾಂಶದಲ್ಲಿ ಸೇರ್ಪಡಿಸಿಕೊಂಡು ಮತ್ತು ಸೇರ್ಪಡಿಸಿಕೊಂಡಿರುವ ಬಗ್ಗೆ ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯೊಂದಿಗೆ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೊಂದಣಿ ಕೇಂದ್ರಕ್ಕೆ ಬಂದು ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ. ರೈತರು ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Date: