Saturday, January 18, 2025
Saturday, January 18, 2025

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ

Date:

ಮಣಿಪಾಲ, ನ.8: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಲ್ಲಿ ರಾಜ್ಯ ಸಂಸ್ಥೆಯ ಸೂಚನೆಯಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಜ್ರ ಮಹೋತ್ಸವದ ಪ್ರಾರಂಭದ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನ ದಿನಾಚರಣೆಯನ್ನು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರ ಸಮ್ಮುಖದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶೇಖರ್ ಪೂಜಾರಿ, ದಳ ನಾಯಕಿಯರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಬನ್ನಿ ಕಬ್, ಬುಲ್ ಬುಲ್ ಸ್ಕೌಟ್ಸ್, ಗೈಡ್ಸ್ , ರೋವರ್, ರೇಂಜರ್ಸ್, ಇವರೆಲ್ಲರ ಸಮ್ಮುಖದಲ್ಲಿ ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾಧಿಕಾರಿಯವರು ಸ್ಕೌಟ್ಸ್ ಗೈಡ್ಸ್ ನಿಧಿಗೆ ದೇಣಿಗೆ ನೀಡುವುದರ ಮೂಲಕ ಉದ್ಘಾಟಿಸಿದರು. ಜಿಲ್ಲಾ ಪದಾಧಿಕಾರಿಯವರೆಲ್ಲರೂ ಅವರೊಂದಿಗೆ ಕೈಜೋಡಿಸಿದರು. ಇತರ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ದೇಣಿಗೆಯನ್ನು ಸಂಗ್ರಹಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!