Sunday, January 19, 2025
Sunday, January 19, 2025

ಪ್ರೊ. ಭಾಸ್ಕರ ಶೆಟ್ಟಿ ಸಲ್ವಾಡಿ ಅವರಿಗೆ ಅಭಿನಂದನಾ ಸಮಾರಂಭ

ಪ್ರೊ. ಭಾಸ್ಕರ ಶೆಟ್ಟಿ ಸಲ್ವಾಡಿ ಅವರಿಗೆ ಅಭಿನಂದನಾ ಸಮಾರಂಭ

Date:

ಉಡುಪಿ, ನ.10: ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇಲ್ಲಿ 7 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಪ್ರೊ. ಭಾಸ್ಕರ ಶೆಟ್ಟಿ ಸಲ್ವಾಡಿ ಅವರಿಗೆ ಅಭಿನಂದನಾ ಸಮಾರಂಭ ಅಜ್ಜರಕಾಡು ಕಾಲೇಜಿನಲ್ಲಿ ನಡೆಯಿತು. ಶಾಸಕ ಯಶ್ಪಾಲ್ ಸುವರ್ಣ ಮಾತನಾಡುತ್ತಾ, ಸರ್ಕಾರಿ ಕಾಲೇಜನ್ನು ಖಾಸಗಿ ಕಾಲೇಜನ್ನು ಮೀರಿಸುವಷ್ಟು ಅಭಿವೃದ್ಧಿಗೊಳಿಸುವಲ್ಲಿ ಪ್ರಾಂಶುಪಾಲರ ಪಾತ್ರ ಪ್ರಮುಖವಾಗಿರುತ್ತದೆ. ಭಾಸ್ಕರ ಶೆಟ್ಟಿಯವರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಮೂಲಕ ಕಾಲೇಜನ್ನು ಪ್ರಗತಿ ಪಥದಲ್ಲಿ ಕೊಂಡೊಯ್ದಿದ್ದಾರೆ ಎಂದರು. ಅಜ್ಜರಕಾಡು ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ ಪ್ರಸಾದ್, ಯುವಜನ ಸಬಲೀಕರಣ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಡಾ. ರೋಶನ್ ಶೆಟ್ಟಿ, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಜೇಂದ್ರ, ಕನ್ನಡ ವಿಭಾಗದ ಡಾ. ನಿಕೇತನ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್, ಐಕ್ಯೂಎಸಿ ಸಂಯೋಜಕಿ ಶ್ರೀಮತಿ ಅಡಿಗ, ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!