Wednesday, November 13, 2024
Wednesday, November 13, 2024

ಉಡುಪಿ ತಾಲೂಕು ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ ತಾಲೂಕು ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ನ.11: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು.

ರೈತರುಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಉಡುಪಿ, ನ.13: ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ...

ಆಳ್ವಾಸ್ ವಿರಾಸತ್-2024: ಮಳಿಗೆ ತೆರೆಯಲು ಆಹ್ವಾನ

ಮೂಡುಬಿದಿರೆ, ನ.13: ಇದೇ ಬರುವ ಡಿಸೆಂಬರ್ 10 ಮಂಗಳವಾರದಿಂದ 15ನೇ ಭಾನುವಾರದವರೆಗೆ...

ಜ್ಞಾನಸುಧಾ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಉಡುಪಿ, ನ.13: ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ...

ವಿದ್ಯಾ ಸರಸ್ವತಿ ಮಡಿಲಿಗೆ ‘ಫ್ಯಾಷನ್ ಕ್ಯಾಟಲಿಸ್ಟ್ ಆಫ್ ದ ಇಯರ್’ ಅವಾರ್ಡ್

ಉಡುಪಿ, ನ.13: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಮಂಗಳೂರಿನ...
error: Content is protected !!