Monday, January 20, 2025
Monday, January 20, 2025

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ: ಪ್ರವಚನ ಸಂಪನ್ನ

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ: ಪ್ರವಚನ ಸಂಪನ್ನ

Date:

ಉಡುಪಿ, ನ.13: ​ಕರಂಬಳ್ಳಿ ವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಮತ್ತು ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಹಮ್ಮಿಕೊಂಡ ಜ್ಞಾನ ದೀಪೋತ್ಸವ ಸಂಪನ್ನಗೊಂಡಿತು.

7 ದಿನಗಳ ಪರ್ಯಂತ ಭಾಗವತ ಸಪ್ತಾಹ (ದಶಮ ಸ್ಕಂದ) ಪ್ರವಚನವನ್ನು ನಡೆಸಿಕೊಟ್ಟ ಉಡುಪಿ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ಶ್ರೀಪಾದರನ್ನು ಅಭಿನಂದಿಸಲಾಯಿತು. ವಾಸ್ತುತಜ್ಞ ಶ್ರೀ ಸುಬ್ರಹ್ಮಣ್ಯ ಭಟ್ ಗುಂಡಿಬೈಲ್ ಕಾರ್ತಿಕ ಮಾಸ ಜ್ಞಾನ ದೀಪೋತ್ಸವದ ಮಹತ್ವವನ್ನು ತಿಳಿಸಿದರು. ಉಡುಪಿ ಪುತ್ತಿಗೆ ಮಠದ ದಿವಾನ ಶ್ರೀ ನಾಗರಾಜ ಆಚಾರ್ಯ ಕರಂಬಳ್ಳಿ, ವಲಯ ಬ್ರಾಹ್ಮಣ ಸಮಿತಿಯ ಚಟುವಟಿಕೆಗಳನ್ನು ಕೊಂಡಾಡಿದರು. ಸಮಿತಿಯ ಅಧ್ಯಕ್ಷ ಕೀಳಂಜೆ ಕೃಷ್ಣರಾಜ್ ಭಟ್ ಸ್ವಾಗತಿಸಿ ಕಾರ್ಯದರ್ಶಿ ನಾಗರಾಜ್ ಭಟ್ ವಂದಿಸಿದರು. ಅರ್ಚಕ ದಿವಾಕರ್ ಐತಾಳ್ ಉಪಸ್ಥಿತರಿದ್ದರು.

ಸಮಿತಿಯ ಪದಾಧಿಕಾರಿಗಳಾದ ಅಜಿತ್ ಬಿಜಾಪುರ್, ರಂಗನಾಥ ಸಾಮಗ, ಲಕ್ಷ್ಮೀನಾರಾಯಣ ಆಚಾರ್, ರಂಗನಾಥ ಸರಳಾಯ, ರಾಜಶೇಖರ್, ಪ್ರಕಾಶಾಚಾರ್, ಶ್ರೀಪತಿ ಭಟ್, ವೇದವ್ಯಾಸಾಚಾರ್, ಚಂದ್ರಕಾಂತ್ ಸಹಕರಿಸಿದರು. ವಾಸುದೇವ ಭಟ್ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!