Monday, January 20, 2025
Monday, January 20, 2025

ಜ್ಞಾನಸುಧಾ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಜ್ಞಾನಸುಧಾ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Date:

ಉಡುಪಿ, ನ.13: ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿಯಾಗಿದೆ, ಆ ಮೂಲಕ ವಿದ್ಯಾರ್ಥಿಗಳಿಗೆ ಶಿಬಿರಗಳು ಗ್ರಾಮೀಣ ಬದುಕಿನ ಸೊಗಡನ್ನು ಬಿಚ್ಚಿಟ್ಟು ಶೈಕ್ಷಣಿಕ ಬದುಕಿಗೆ ಹೊಸ ರೂಪ ಕೊಡುತ್ತಿದೆ. ನನ್ನ ವಿದ್ಯಾರ್ಥಿ ಜೀವನದಲ್ಲೂ ಎನ್.ಎಸ್.ಎಸ್. ನಲ್ಲಿ ತೊಡಗಿಸಿಕೊಂಡ ಸ್ವ ಅನುಭವದಿಂದ ಈ ಅರಿವಾಗಿದೆ ಎಂದು ಎನ್.ಎಂ.ಎ.ಎಂ ಇಂಜಿನಿಯರಿಂಗ್ ಕಾಲೇಜು ನಿಟ್ಟೆಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ ಪೂಜಾರಿ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲಂಬಾಡಿ ಪದವು ಇಲ್ಲಿ ನಡೆದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಹತ್ತು ಶಿಬಿರಗಳನ್ನು ಯಶಸ್ವಿಯಾಗಿ ಸಂಘಟಿಸಿದ ಎನ್.ಎಸ್.ಎಸ್. ಶಿಬಿರಾಧಿಕಾರಿ ರವಿ ಜಿ. ಅವರನ್ನು ಸನ್ಮಾನಿಸಿ, ಪ್ರಸ್ತುತ ಶಿಬಿರಕ್ಕೆ ಸಹಕರಿಸಿದ ಸರ್ವರನ್ನು ಪ್ರಶಂಶಿಸಿದರು. ಉಡುಪಿ ಜಿಲ್ಲಾ ಎನ್.ಎಸ್.ಎಸ್. ನೋಡಲ್ ಅಧಿಕಾರಿ ಡಾ.ಜಯಶಂಕರ ಕಂಗಣ್ಣಾರು ಮಾತನಾಡಿ ಎನ್.ಎಸ್.ಎಸ್. ಶಿಬಿರದ ಮಹತ್ವ ತಿಳಿಸಿದರು. ಶಿಬಿರದಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರನ್ನು ಅಭಿನಂದಿಸಲಾಯಿತು. ಶಿಬಿರ ನಡೆದ ಸವಿನೆನಪಿಗೆ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ವತಿಯಿಂದ ರೂ.೧೦,೦೦೦ ದತ್ತಿನಿಧಿಯನ್ನು ಆತಿಥೇಯ ಶಾಲೆಗೆ ನೀಡಿ ಅದರ ಬಡ್ಡಿ ಮೊತ್ತವನ್ನು ಪ್ರತಿವರ್ಷ ಏಳನೇ ತರಗತಿಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ ಕೊಡುವ ಯೋಜನೆಯನ್ನು ಪ್ರಸ್ತಾಪಿಸಲಾಯಿತು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕಶನ್ ಟ್ರಸ್ಟ್(ರಿ.) ಟ್ರಸ್ಟಿಗಳಾದ ಅನಿಲ್ ಕುಮಾರ್ ಜೈನ್, ಸಿ.ಎ. ನಿತ್ಯಾನಂದ ಪ್ರಭು, ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಆಡಳಿತ ಮಂಡಳಿಯ ಸದಸ್ಯರಾದ ಶಾಂತಿರಾಜ ಹೆಗ್ಡೆ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಸ್ಟೂಡೆಂಟ್ ಅಫರ‍್ಸ್ ಶಕುಂತಲಾ ಎಂ. ಸುವರ್ಣ, ನಿಟ್ಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಿತಿನ್ ಸಾಲ್ಯಾನ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಂಬಾಡಿ ಪದವು ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ಜಯಂತ್ ನಾಯಕ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಓ. ದಿನೇಶ್ ಎಂ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್. ಶಿಬಿರಾಧಿಕಾರಿ ರವಿ ಜಿ. ವಂದಿಸಿದರು. ಮಣಿಪಾಲ ಜ್ಞಾನಸುಧಾ ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!