Friday, November 15, 2024
Friday, November 15, 2024

ವಿಟಿಯು ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ

ವಿಟಿಯು ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ

Date:

ಮೂಡುಬಿದಿರೆ, ನ.14: ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರು ಇವರ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ನಡೆದ ವಿಟಿಯು ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್ ಮತ್ತು ದೇಹದಾಢ್ಯ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಆಳ್ವಾಸ್ ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿತು. ವೇಯ್ಟ್ ಲಿಫ್ಟಿಂಗ್ ನಲ್ಲಿ ದ್ವಿತೀಯ ಸ್ಥಾನವನ್ನು ಎನ್‌ಎಮ್‌ಎಎಮ್‌ಐಟಿ ನಿಟ್ಟೆ, ತೃತೀಯ ಸ್ಥಾನವನ್ನು ಯೆನಪೋಯ ಮೂಡುಬಿದಿರೆ ಇವರು ಪಡೆದುಕೊಂಡರು. ಬಾಲಕಿಯರ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಯೆನೆಪೋಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮೂಡುಬಿದಿರೆ, ದ್ವಿತೀಯ ಸ್ಥಾನವನ್ನು ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಬೆಂಗಳೂರು, ತೃತೀಯ ಸ್ಥಾನವನ್ನು ಎನ್‌ಐಇ ಮೈಸೂರು ಪ್ರಶಸ್ತಿಯನ್ನು ಪಡೆಯಿತು. ದೇಹದಾಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಕೆಎಲ್‌ಎಸ್ ಗೋಗಟೆ ತಾಂತ್ರಿಕ ಕಾಲೇಜು ಬೆಳಗಾವಿ, ತೃತೀಯ ಸ್ಥಾನವನ್ನು ಜಿಎಮ್ ತಾಂತ್ರಿಕ ಕಾಲೇಜು, ದಾವಣಗೆರೆ ಪಡೆದುಕೊಂಡಿತು. ಬೆಸ್ಟ್ ಲಿಫ್ಟರ್ ಬಾಲಕರ ವಿಭಾಗದಲ್ಲಿ ಆಕಾಶ್ ಎಜೆಇಐಟಿ ಮಂಗಳೂರು, ಬೆಸ್ಟ್ ಲಿಫ್ಟರ್ ಬಾಲಕಿಯರ ವಿಭಾಗದಲ್ಲಿ ರಿಕ್ತಕಿರಣ್ ಶ್ರೀನಿವಾಸ ಕಾಲೇಜು ಮಂಗಳೂರು. ಮಿಸ್ಟರ್ ವಿಟಿಯು ಆಳ್ವಾಸಿನ ಭರತ್ ಪ್ರಶಸ್ತಿಯನ್ನು ಪಡೆದರು. ಬಹುಮಾನ ವಿತರಣಾ ಸಮಾರಂಭದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರಿನ ಪ್ರಾಂಶುಪಾಲರಾದ ಡಾ. ಪೀಟರ್ ಫೆರ್ನಾಂಡಿಸ್, ವಿಟಿಯು ವೀಕ್ಷಕರಾಗಿ ನಿಟ್ಟೆ ಕಾಲೇಜಿನ ಶ್ಯಾಮ್ ಸುಂದರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ನರೇಂದ್ರ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ...

ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯ: ಡಾ. ರಂಜಿತ ರಾವ್

ಮಂಗಳೂರು, ನ.14: ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಪ್ರಾಣವನ್ನು ಉಳಿಸಬಹುದು...

ಅಧ್ಯಕ್ಷರ ಆಯ್ಕೆ: ಚುನಾವಣಾ ಅಧಿಕಾರಿ ನೇಮಕ

ಉಡುಪಿ, ನ.14: ಜಿಲ್ಲೆಯ ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಲ್ಲೂರು ಗ್ರಾಮ...

ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ: ಅರ್ಜಿ ಆಹ್ವಾನ

ಉಡುಪಿ, ನ.14: ಹಿಂದುಳಿದ ವರ್ಗಗಳ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ...
error: Content is protected !!