Friday, November 15, 2024
Friday, November 15, 2024

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ನರೇಂದ್ರ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ: ಯಶ್ಪಾಲ್ ಸುವರ್ಣ

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ನರೇಂದ್ರ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ: ಯಶ್ಪಾಲ್ ಸುವರ್ಣ

Date:

ಉಡುಪಿ, ನ.14: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಕರಾವಳಿ ಜನತೆಗೆ ಹೆಮ್ಮೆಯ ಪಾಲಿಗೆ ಸದಾ ಹೆಮ್ಮೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಕಸಿತ ಭಾರತ ನಿರ್ಮಾಣಕ್ಕಾಗಿ ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ಮೂಲಕ ವಿಶ್ವಗುರು ಭಾರತದ ಕನಸು ನನಸಾಗಿಸುವ ಸಂಕಲ್ಪ ನಾವೆಲ್ಲರೂ ಮಾಡೋಣ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರೂ. 15 ಲಕ್ಷ ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳ‌ಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಓರ್ವ ಶಾಸಕನಾಗಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಪ್ರವೃತ್ತರಾಗಿದ್ದು ಕ್ಷೇತ್ರದ ಜನತೆಯ ಸಹಕಾರದಿಂದ ಉಡುಪಿ ಕ್ಷೇತ್ರವನ್ನು ಮಾದರಿಯಾಗಿ ರೂಪಿಸಲು ಬದ್ಧ ಎಂದರು. ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡಿ ಶುಭ ಹಾರೈಸಿದರು.

ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ತೆಂಕನಿಡಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅರುಣ್ ಜತ್ತನ್, ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ಗಾಯತ್ರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶರತ್ ಬೈಲಕೆರೆ, ಗ್ರಾಮ ಪಂಚಾಯತ್ ಸದಸ್ಯರಾದ ವಿನೋದ್ ಸುವರ್ಣ, ಸತೀಶ್ ಪೂಜಾರಿ, ಮಾಲಿನಿ, ಪುಷ್ಪ ಉಮೇಶ್, ಪಕ್ಷದ ಪ್ರಮುಖರಾದ ವಿಜಯ ಪ್ರಕಾಶ್, ಕಿರಣ್ ಪಿಂಟೋ, ಕಾವೇರಿ ಗಾಣಿಗ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯ: ಡಾ. ರಂಜಿತ ರಾವ್

ಮಂಗಳೂರು, ನ.14: ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಪ್ರಾಣವನ್ನು ಉಳಿಸಬಹುದು...

ಅಧ್ಯಕ್ಷರ ಆಯ್ಕೆ: ಚುನಾವಣಾ ಅಧಿಕಾರಿ ನೇಮಕ

ಉಡುಪಿ, ನ.14: ಜಿಲ್ಲೆಯ ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಲ್ಲೂರು ಗ್ರಾಮ...

ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ: ಅರ್ಜಿ ಆಹ್ವಾನ

ಉಡುಪಿ, ನ.14: ಹಿಂದುಳಿದ ವರ್ಗಗಳ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ...

ವಿಟಿಯು ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ

ಮೂಡುಬಿದಿರೆ, ನ.14: ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರು ಇವರ...
error: Content is protected !!