Sunday, January 18, 2026
Sunday, January 18, 2026

ಸಂತೆಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಸಂತೆಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಉಡುಪಿ, ನ.15: ಉಡುಪಿ ನಗರದ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದಿತ್ಯವಾರ ಸಂತೆಯ ದಿನ ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಹಿನ್ನಲೆಯಲ್ಲಿ ರಸ್ತೆಯ ಇಕ್ಕೆಲಗಳನ್ನು ಸಮತಟ್ಟು ಮಾಡಿ ಪಾರ್ಕಿಂಗ್ ವ್ಯವಸ್ಥೆ, ಬೀದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದಲ್ಲಿ ಇಂಟರ್ ಲಾಕ್ ಅಳವಡಿಕೆ ಮಾಡಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವುದು, ಒಣ ಮೀನು ಮಾರಾಟಗಾರರಿಗೆ ಸೂಕ್ತ ಶೆಡ್ ನಿರ್ಮಾಣ, ಅಪಾಯಕಾರಿ ಮರಗಳ ತೆರವು, ಮಾರುಕಟ್ಟೆ ಪರಿಸರದಲ್ಲಿ ಹೈಮಾಸ್ಟ್ ದೀಪ ಅಳವಡಿಕೆ, ಶೀಘ್ರದಲ್ಲಿ ಪ್ರಾರಂಭಗೊಳ್ಳಲಿರುವ ಸಂತೆ ಮಾರುಕಟ್ಟೆಯಿಂದ ರಾಷ್ಟೀಯ ಹೆದ್ದಾರಿ ಸಂಪರ್ಕ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಬಗ್ಗೆ ಸ್ಥಳೀಯರ ಅಭಿಪ್ರಾಯ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ ಕುಂದರ್, ಉಪಾಧ್ಯಕ್ಷರಾದ ಪ್ರೇಮಲತಾ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ದೇವಾಡಿಗ, ಸತೀಶ್ ನಾಯ್ಕ್, ನವೀನ್ ಕಾಂಚನ್, ಕವಿತಾ, ಪಕ್ಷದ ಪ್ರಮುಖರಾದ ಉಮೇಶ್ ಶೆಟ್ಟಿ, ಪ್ರಶಾಂತ್ ಕಾಂಚನ್ ಬೆಂಗ್ರೆ, ಪ್ರಸಾದ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಟ್ಟುಗುಳ್ಳ ಹೊರೆಕಾಣಿಕೆ

ಉಡುಪಿ, ಜ.17: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ‌...

ಉಡುಪಿ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ

ಉಡುಪಿ, ಜ.17: ಜಾಗತಿಕ ಸವಾಲುಗಳಿಗೆ ಉತ್ತರ ನೀಡಲು ಖಾಸಗೀ ಶಿಕ್ಷಣ ಸಂಸ್ಥೆಗಳಿಂದ...

ಸಾಂಸ್ಕೃತಿಕ ಸ್ಪರ್ಧೆಗಳಿಂದ ಸುಪ್ತ ಪ್ರತಿಭೆಗಳ ಅನಾವರಣ: ಪಿ.ಎನ್ ಆಚಾರ್ಯ

ತೆಂಕನಿಡಿಯೂರು, ಜ.17: “ಮಕರ ಸಂಕ್ರಾಂತಿ ಹಬ್ಬದಂದು ವಿದ್ಯಾರ್ಥಿಗಳನ್ನು ಸ್ಪರ್ಧೆಗಳ ಆಯೋಜನೆ ಮೂಲಕ...
error: Content is protected !!