Saturday, November 16, 2024
Saturday, November 16, 2024

ಸರಸ್ವತಿ ವಿದ್ಯಾಲಯದಲ್ಲಿ ಆಡುಂಬೊಲ ಕಾರ್ಯಕ್ರಮ

ಸರಸ್ವತಿ ವಿದ್ಯಾಲಯದಲ್ಲಿ ಆಡುಂಬೊಲ ಕಾರ್ಯಕ್ರಮ

Date:

ಗಂಗೊಳ್ಳಿ, ನ.16: ಗ್ರಾಮೀಣ ಕ್ರೀಡೆಗಳು ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ. ಇಂತಹ ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳುವಂತೆ ಅವಕಾಶಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇಸಿಓ ರಾಜ ಖಾರ್ವಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಜಿಎಸ್‌ವಿಎಸ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ಗ್ರಾಮೀಣ ಆಟಗಳ ಕ್ರೀಡಾಕೂಟ ಆಡುಂಬೊಲವನ್ನು ಉದ್ಘಾಟಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮತ್ತು ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ ಸ್ವಾಗತಿಸಿ, ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಬಹುಮಾನಗಳನ್ನು ವಿತರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ವಂದಿಸಿದರು. ಬಾಲಕಿಯರ ವಿಭಾಗದಲ್ಲಿ ಎಸ್. ವಿ ಟೈಟಾನ್ಸ್ ತಂಡ ಮತ್ತು ಬಾಲಕರ ವಿಭಾಗದಲ್ಲಿ ಎಸ್‌.ವಿ ರೇಂಜರ್ಸ್ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡವು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

ಉಡುಪಿ, ನ.15: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

ಆರೋಗ್ಯವಂತ ಹವ್ಯಾಸಗಳನ್ನು ರೂಢಿಸಿಕೊಳ್ಳಿ: ಡಾ. ಪಿ.ವಿ. ಭಂಡಾರಿ

ಬ್ರಹ್ಮಾವರ, ನ.15: ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ...

ನವಜಾತ ಶಿಶುವಿನ ಆರೈಕೆಗೆ ತಾಯಂದಿರು ಹೆಚ್ಚಿನ ಆದ್ಯತೆ ನೀಡಿ: ಜಿಲ್ಲಾಧಿಕಾರಿ

ಉಡುಪಿ, ನ.15: ನವಜಾತ ಶಿಶುವಿನ ಅವಧಿಯು ಮಕ್ಕಳ ಜೀವನದಲ್ಲಿ ಅತ್ಯಂತ ನಿರ್ಣಾಯಕ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಸ್ವಾಗತಾರ್ಹ ವಾತಾವರಣ ಕಲ್ಪಿಸಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ, ನ.15: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲತೆಗಳನ್ನು ಹೆಚ್ಚಿಸುವ...
error: Content is protected !!