Sunday, November 17, 2024
Sunday, November 17, 2024

ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವ ಜ್ಞಾನಸುಧಾ: ಅಭಿನ್ ದೇವಾಡಿಗ

ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವ ಜ್ಞಾನಸುಧಾ: ಅಭಿನ್ ದೇವಾಡಿಗ

Date:

ಮಣಿಪಾಲ, ನ.16: ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡೆ ನಮ್ಮನ್ನು ದುಶ್ಚಟಗಳಿಂದ ದೂರವಿರಿಸುತ್ತದೆ. ಕ್ರೀಡೆಗೆ ಸರ್ಕಾರ ಕೂಡ ಗಮನ ನೀಡುತ್ತಿರುವುದರಿಂದ ಕ್ರೀಡಾ ಮೀಸಲಾತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ರಾಷ್ಟ್ರಪ್ರಶಸ್ತಿ ವಿಜೇತ ಕ್ರೀಡಾಪಟು ಅಭಿನ್ ದೇವಾಡಿಗ ಇವರು ಮಣಿಪಾಲದ ವಿದ್ಯಾನಗರದಲ್ಲಿ ನಡೆದ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜುಗಳು ಜಂಟಿಯಾಗಿ ಹಮ್ಮಿಕೊಂಡ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಿರೂರ್ ಶ್ರೀಧರ್ ಶೆಟ್ಟಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿಪೂರ್ವ ಕಾಲೇಜು ಕೊಕ್ಕರ್ಣೆ ಇವರು ಮಾತನಾಡಿ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುವುದು ಆದ್ದರಿಂದ ಕ್ರೀಡೆಗೆ ದಿನದ ಒಂದಿಷ್ಟು ಸಮಯ ಮೀಸಲಿಡಬೇಕು. ವಿದ್ಯಾರ್ಥಿಗಳ ಪ್ರತಿಭೆಗೆಳ ಅನಾವರಣ ಇಂತಹ ಕ್ರೀಡಾಕೂಟದಿಂದ ಸಾಧ್ಯ ಎಂದರು. ಈ ಸಂದರ್ಭದಲ್ಲಿ ಉಭಯ ಸಂಸ್ಥೆಗಳ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು. ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ರಾಷ್ಟ್ರ ಪ್ರಶಸ್ತಿ ವಿಜೇತ ಕ್ರೀಡಾ ಪಟು, ಅಭಿನ್ ದೇವಾಡಿಗರವರಿಗೆ ಹಸ್ತಾಂತರಿಸಿದರು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅದ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು., ಮೊದಲಾದವರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಅರುಣ್ ಕುಮಾರ್ ವಂದಿಸಿ, ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೂರ್ತದಿಂದ ಮೂರ್ತದಡೆಗೆ ನಮ್ಮನ್ನು ಕೊಂಡೊಯ್ಯುವುದೇ ಕವನ: ಡಾ. ಮಾಧವಿ ಭಂಡಾರಿ

ಉಡುಪಿ, ನ.16: ಅಮೂರ್ತದಿಂದ ಮೂರ್ತದಡೆಗೆ ನಮ್ಮನ್ನು ಕೊಂಡೊಯ್ಯುವುದೇ ಕವನ. ಕವಿಗಳು ತಮ್ಮ...

ತೆಂಕನಿಡಿಯೂರು ಕಾಲೇಜು: ಬಿರ್ಸಾ ಮುಂಡಾ ಜನ್ಮದಿನಾಚರಣೆ

ಉಡುಪಿ, ನ.16: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ...

ಸರಸ್ವತಿ ವಿದ್ಯಾಲಯದಲ್ಲಿ ಆಡುಂಬೊಲ ಕಾರ್ಯಕ್ರಮ

ಗಂಗೊಳ್ಳಿ, ನ.16: ಗ್ರಾಮೀಣ ಕ್ರೀಡೆಗಳು ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ...
error: Content is protected !!