Sunday, February 23, 2025
Sunday, February 23, 2025

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ: ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ: ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು

Date:

ಉಡುಪಿ, ನ.16: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದು ಹಾಕುವ ಕಾರ್ಯಗಳನ್ನು ಯಾವುದೇ ಲೋಪದೋಷಗಳಿಲ್ಲದಂತೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಮತದಾರರ ಪಟ್ಟಿಯ ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವು ಚುನಾವಣೆ ಆಯೋಗದ ಸೂಚನೆ ಮೇರೆಗೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ಒಂದು ತಿಂಗಳ ಕಾಲ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಂದ ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರನ್ನು ತೆಗೆದು ಹಾಕುವಂತಹ ಡೇಟಾವನ್ನು ಪರಿಶೀಲಿಸಲು ಮನೆಗಳಿಗೆ ಭೇಟಿ ನೀಡುತ್ತಾರೆ. ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳನ್ನು ನಿಯೋಜಿಸಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಮಾಡಿದರು.

ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊರ ಜಿಲ್ಲೆಗಳಿಂದ ಉದ್ಯೋಗವನ್ನು ಅರಸಿ ಬಂದು ಇಲ್ಲಿಯೇ ವೃತ್ತಿಯನ್ನು ಕೈಗೊಂಡು ಕಳೆದ ನಾಲ್ಕೈದು ವರ್ಷಗಳಿಂದ ವಾಸವಿರುವಂತವರ ಹೆಸರು ಸೇರ್ಪಡೆ ಮಾಡಬೇಕು. ಈ ಹಿಂದೆ ತಮ್ಮ ಸ್ವಂತ ಊರಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದಲ್ಲಿ ತೆಗೆದುಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. 18 ವರ್ಷ ತುಂಬಿದ ಅರ್ಹ ಪ್ರತಿಯೊಬ್ಬ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಅರ್ಹ ದಾಖಲೆಗಳನ್ನು ನೀಡಿ, ದಾಖಲಿಸಲು ಹಾಗೂ ವಿಶೇಷ ಮತದಾರರ ನೋಂದಣಿ ಆಂದೋಲನ ದಿನಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಎಂದ ಅವರು, ಸರ್ವಿಸ್ ವೋಟರ್ಸ್ಗಳ ನೊಂದಣಿಗೂ ಸಹ ಆದ್ಯತೆ ನೀಡಬೇಕು ಎಂದರು. ಆನ್‌ಲೈನ್ ಮೂಲಕ ಅಥವಾ ನೇರವಾಗಿ ಮತದಾರರ ನೋಂದಣಿ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಅರ್ಜಿಗಳನ್ನು ಸಲ್ಲಿಸಿದಾಗ ಅವುಗಳನ್ನು ವಿಳಂಬವಿಲ್ಲದೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲೆಯ ಕೆಲವು ಮತಗಟ್ಟೆಗಳಲ್ಲಿ 1500 ಕ್ಕೂ ಹೆಚ್ಚಿನ ಮತಗಳಿದ್ದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪನೆಗೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಕಳಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕೈಗೊಂಡಿರುವ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ತಾಲೂಕು ತಹಶೀಲ್ದಾರ್ ಗಳು, ವಿವಿಧ ಪಕ್ಷಗಳ ಏಜೆಂಟರುಗಳಾದ ಬಿಜೆಪಿಯ ಚಂದ್ರಶೇಖರ ಪ್ರಭು, ಕಾಂಗ್ರೆಸ್‌ನ ಬಿ ಕುಶಲ್ ಶೆಟ್ಟಿ, ಜೆಡಿಎಸ್ ನ ರಾಮರಾವ್, ಸಿ.ಪಿ.ಐ ನ ಬಾಲಕೃಷ್ಣ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!