ಉಡುಪಿ, ನ.18: ಜಿಲ್ಲಾ ನ್ಯಾಾಯಾಲಯದ ಆವರಣದಲ್ಲಿ ಉಡುಪಿ ನ್ಯಾಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಾಯಾಧೀಶರು ಶ್ರೀಕೃಷ್ಣ ಮಠಕ್ಕೆ ರವಿವಾರ ಭೇಟಿ ನೀಡಿದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ಹೈಕೋರ್ಟ್ ನ್ಯಾಯಾಧೀಶರಾದ ಎಂ.ಜಿ.ಉಮಾ, ರಾಮಚಂದ್ರ ಡಿ.ಹುದ್ದಾರ್, ಟಿ.ವೆಂಕಟೇಶ್ ನಾಯಕ್, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್, ಅಡ್ವಕೇಟ್ ಜನರಲ್ ಶಶಿಕಿರಣ್ ಎಸ್.ಶೆಟ್ಟಿ, ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕಿರಣ್ ಎಸ್. ಗಂಗಣ್ಣನವರ್ ಭೇಟಿ ನೀಡಿ ಪರ್ಯಾಯ ಪುತ್ತಿಗೆ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡು ಕೋಟಿ ಗೀತಾಲೇಖನ ಯಜ್ಞದ ದೀಕ್ಷೆಯನ್ನು ಪಡೆದುಕೊಂಡರು.
ಶ್ರೀ ಕೃಷ್ಣ ಮಠಕ್ಕೆ ನ್ಯಾಯಾಧೀಶರ ತಂಡ ಭೇಟಿ

ಶ್ರೀ ಕೃಷ್ಣ ಮಠಕ್ಕೆ ನ್ಯಾಯಾಧೀಶರ ತಂಡ ಭೇಟಿ
Date: