Monday, February 24, 2025
Monday, February 24, 2025

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ: ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ: ವೇಳಾಪಟ್ಟಿ ಪ್ರಕಟ

Date:

ಉಡುಪಿ, ನ.19: ರಾಜ್ಯ ಚುನಾವಣಾ ಆಯೋಗವು ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಒಟ್ಟು 33 ಸದಸ್ಯ ಸ್ಥಾನಗಳನ್ನು ಭರ್ತಿ ಮಾಡುವ ಸಲುವಾಗಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಎ ಮತ್ತು 308 ಎಬಿ ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ. ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ನವೆಂಬರ್ 21. ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 27. ಕೊನೆಯ ದಿನವಾಗಿದ್ದು, ನವೆಂಬರ್ 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ನವೆಂಬರ್ 30 ಕೊನೆಯ ದಿನವಾಗಿದ್ದು, ಡಿಸೆಂಬರ್ 8 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಕಾರ್ಯವು ಡಿಸೆಂಬರ್ 11 ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.24: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!