Monday, January 20, 2025
Monday, January 20, 2025

ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ

ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ

Date:

ಉಡುಪಿ, ನ.20: ನಿರ್ಮಾಣ ಹಂತದಲ್ಲಿರುವ 250 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಭೇಟಿ ಕಾಮಗಾರಿಯ ಪ್ರಗತಿ ಹಾಗೂ ಬಾಕಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ನೂತನ ಜಿಲ್ಲಾಸ್ಪತ್ರೆಯ ಬೇಡಿಕೆಗೆ ಅನುಗುಣವಾಗಿ ಹುದ್ದೆಗಳ ಮಂಜೂರು, ಸುಸಜ್ಜಿತ ಕ್ರಿಟಿಕಲ್ ಕೇರ್ ಘಟಕ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ, ಅಗತ್ಯ ಮೂಲ ಸೌಕರ್ಯ ಅಭಿವೃದ್ಧಿಗೆ ಕಾಮಗಾರಿಗಳ ಮಂಜೂರಾತಿ ಹಾಗೂ ಉತ್ತಮ ಚಿಕಿತ್ಸೆಗೆ ಪೂರಕ ಅಗತ್ಯ ಸಲಕರಣೆಗಳ ಖರೀದಿ ಮೊದಲಾದ ಬೇಡಿಕೆಗಳ ಬಗ್ಗೆ ಅಧಿಕಾರಿಗಳಿಂದ ಶಾಸಕ ಯಶ್ಪಾಲ್ ಸುವರ್ಣ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒದಗಿಸಲು ವಿಶೇಷ ಆದ್ಯತೆ ನೀಡಲಿದ್ದು, ಆರೋಗ್ಯ ಸಚಿವರನ್ನು ಅತೀ ಶೀಘ್ರದಲ್ಲಿ ಭೇಟಿಯಾಗಿ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಬಾಕಿ ಅನುದಾನ ಬಿಡುಗಡೆ ಹಾಗೂ ಅಗತ್ಯ ಹುದ್ದೆಗಳ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ಹೇಳಿದರು.

ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾದ ಡಾ. ಅಶೋಕ್, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು, ಇಲಾಖೆಯ ಇಂಜಿನಿಯರ್ ಹಾಗೂ ಗುತ್ತಿಗೆದಾರ ಕಂಪೆನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!