Tuesday, January 21, 2025
Tuesday, January 21, 2025

ಪಂಚವರ್ಣ ಸಂಘಟನೆಯಿಂದ ಹೊಸಬದುಕು ಆಶ್ರಮಕ್ಕೆ ನೆರವು

ಪಂಚವರ್ಣ ಸಂಘಟನೆಯಿಂದ ಹೊಸಬದುಕು ಆಶ್ರಮಕ್ಕೆ ನೆರವು

Date:

ಕೋಟ, ನ.20: ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ವಿನಯಚಂದ್ರ ಸಾಸ್ತಾನ ನೇತೃತ್ವದ ಉಡುಪಿಯ ಹೊಸಬದುಕು ಆಶ್ರಮಕ್ಕೆ ದಿನಸಿ ಪರಿಕರಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ಮಂಗಳವಾರ ಪಂಚವರ್ಣದ ಕಛೇರಿಯಲ್ಲಿ ಜರಗಿತು. ಮಣೂರು ಸ್ನೇಹಕೂಟದ ಮಾರ್ಗದರ್ಶಕರಾದ ವಿಷ್ಣುಮೂರ್ತಿ ಮಯ್ಯ ಆಶ್ರಯಮದ ಮುಖ್ಯಸ್ಥರಿಗೆ ದಿನಸಿ ಇತರ ಪರಿಕರಗಳನ್ನು ಹಸ್ತಾಂತರಿಸಿ ಸಂಘಸಂಸ್ಥೆಗಳು ಇಂತಹ ಕಾರ್ಯಕ್ರಮದಲ್ಲಿ ಕೈಜೋಡಿಸಿ ಅಶಕ್ತರ ಅಥವಾ ಅನಾಥಾಶ್ರಮಗಳ ನೆರವಿಗೆ ಶ್ರಮಿಸಬೇಕು ಎಂದರು.

ಹೊಸಬದುಕು ಆಶ್ರಯದ ಟ್ರಸ್ಟಿ ರಾಜೇಶ್ಚರಿ ವಿನಯಚಂದ್ರ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಕ ಸದಸ್ಯ ನರಸಿಂಹ ಗಾಣಿಗ, ಸಂಚಾಲಕ ಅಮೃತ್ ಜೋಗಿ, ಕಾರ್ಯದರ್ಶಿ ವಸಂತಿ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!