ಉಡುಪಿ, ನ.21: ರಾಷ್ಟೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ ಹಾಗೂ ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ಶಾಖಾ ಗ್ರಂಥಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಧ್ಯಮಶೀಲತಾ ತರಬೇತಿಯ ಕುರಿತು ಒಂದು ದಿನದ ಕಾರ್ಯಗಾರ ನಡೆಯಿತು. ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾರ್ಕಳ ಶಾಖಾ ಗ್ರಂಥಾಲಯದ ಗ್ರಂಥಪಾಲಕಿ ವನಿತಾ, ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಉಷಾ ನಾಯಕ್, ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನ ಹೆಚ್.ಓ.ಡಿ ಜೈಕಿಶನ್ ಭಟ್, ಕೌಶಲ್ಯಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಬಿ, ಸೀಡಾಕ್ ಸೆಂಟರ್ ಮ್ಯಾನೇಜರ್ ಪೃಥ್ವಿರಾಜ್ ನಾಯಕ್, ಸಿಡಾಕ್‌ನ ಶ್ರುತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಧಿಕಾರಿ ಜಯಶ್ರೀ ಸ್ವಾಗತಿಸಿ, ಪ್ರೇಮ ನಿರೂಪಿಸಿ, ಗ್ರಂಥಾಪಾಲಕಿ ನಮಿತಾ ವಂದಿಸಿದರು.
ಉದ್ಯಮಶೀಲತಾ ತರಬೇತಿ ಕಾರ್ಯಾಗಾರ
ಉದ್ಯಮಶೀಲತಾ ತರಬೇತಿ ಕಾರ್ಯಾಗಾರ
Date: