ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ ಅಂಗವಾಗಿ ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಕೃಷಿ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿಸೆಂಬರ್ 12 ರಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ತಯಾರಿಸುವ ಖಾದ್ಯ, ಬೇಕಾಗುವ ಸಾಮಾಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 7 ರ ಒಳಗಾಗಿ ಇ-ಮೇಲ್ ವಿಳಾಸ [email protected] ಅಥವಾ ಖುದ್ದಾಗಿ / ಪೋಸ್ಟ್ ಮೂಲಕ ಜಂಟಿ ಕೃಷಿ ನಿರ್ದೇಶಕರ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.