Monday, January 20, 2025
Monday, January 20, 2025

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

Date:

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಆರುಣ್ಯಾ 2024 ಮ್ಯಾನೇಜ್ಮೆಂಟ್ ಸ್ಪರ್ಧೆಯ ಸಮಾರೋಪ ಕಾರ್ಯಕ್ರಮ ಕಾಲೇಜಿನ ಶ್ರೀ ವೀರರಾಜೇಂದ್ರ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಗಣೇಶ ಶೆಟ್ಟಿ ಮೋಳಹಳ್ಳಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದಿಸೆಯಲ್ಲಿ ಕಾಲೇಜಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಶಾರದಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ, ಐಕ್ಯೂಎಸಿ ಸಂಚಾಲಕರಾದ ಸಂದೀಪ್ ಕೆ ಉಪಸ್ಥಿತರಿದ್ದರು. ಆರುಣ್ಯಾ 2024 ಸಂಚಾಲಕ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕುಮಾರ ಪಿ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಪ್ರಮೀಳಾ ಮತ್ತು ಅರ್ಥಶಾಸ್ತ್ರ ಉಪನ್ಯಾಸಕ ಅಕ್ಷಯ ಹೆಗ್ಡೆ, ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಶ್ವನಾಥ ಆಚಾರ್ಯ ನಿರ್ವಹಿಸಿದರು. ಅಂತರ್ ಕಾಲೇಜು ಸ್ವರ್ಧೆಯಲ್ಲಿ ಭಂಡಾರ್ಕಾರ್ಸ್ ಪಿಯು ಕಾಲೇಜು ಚಾಂಪಿಯನ್ಷಿಪ್ ಪ್ರಥಮ ಬಹುಮಾನ ಪಡೆದರು. ರನ್ಸರ್ಸ್ ಆಗಿ ಉಡುಪಿ ಪೂರ್ಣಪ್ರಜ್ಞ ಪಿಯು ಕಾಲೇಜು ತಂಡ ಬಹುಮಾನ ಪಡೆದುಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!