Monday, January 20, 2025
Monday, January 20, 2025

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನವೆಂಬರ್‌ 21ರಂದು ನಡೆದ 2024-25ನೇ ಸಾಲಿನ ಪದವಿಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು , ವಿದ್ಯಾನಗರದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳು ಭಾಗವಹಿಸಿ ಇಂಗ್ಲೀಷ್‌ ಪ್ರಬಂಧ ಸ್ಪರ್ಧೆಯಲ್ಲಿ ಅಲಿಷಾ ಕ್ಲಿಯಾಂತ ಬಿ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಅನುಷ್ಕಾ ಆರ್‌ ಖಾರ್ವಿ ದ್ವಿತೀಯ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತನ್ಮಯಿ ಭಟ್‌ ಇವರು ಜನಪದ ಗೀತೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!