Tuesday, February 25, 2025
Tuesday, February 25, 2025

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

Date:

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು ಮತ್ತು ಶ್ರೀ ವಿಶ್ವೇಶತೀರ್ಥ ಮಹಾವಿದ್ಯಾಲಯ ಪದವಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಅದಮಾರು ಪಿ.ಪಿ.ಸಿ ಪ.ಪೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಜಿತ್ ಶೆಟ್ಟಿ ಎರ್ಮಾಳು ಕ್ರೀಡಾಕೂಟ ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಎಷ್ಟು ಮುಖ್ಯವೋ ಕ್ರೀಡೆಯೂ ಕೂಡ ಅಷ್ಟೇ ಮುಖ್ಯ. ವಿದ್ಯಾರ್ಥಿಗಳು ಪ್ರತೀ ವರ್ಷ ನಡೆಯುವ ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಲು ಇರುವ ಉತ್ತಮ ಅವಕಾಶವನ್ನು ಬಳಸಿಕ್ಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿ ಖಜಾಂಜಿ ಲಕ್ಷ್ಮಿನಾರಾಯಣ ಉಪಾಧ್ಯಾ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಪ್ರಾಂಶುಪಾಲ ವಿಜಯ್ ಪಿ ರಾವ್, ಉಪಪ್ರಾಂಶುಪಾಲೆ ಕಮಲಾಕ್ಷೀ ಪ್ರಕಾಶ್, ಪದವಿ ಕಾಲೇಜಿನ ಸಂಯೋಜಕಿ ರಕ್ಷಿತಾ, ದೈಹಿಕ ಶಿಕ್ಷಣ ನಿರ್ದೇಶಕ ವಕ್ಷತ್ ಸಾಲಿಯಾನ್, ಆನಂದತೀರ್ಥ ವಿದ್ಯಾಲಯದ ದೈ.ಶಿ. ಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ, ಸಚಿನ್ ಉಪಸ್ಥಿತರಿದ್ದರು. ತೃತೀಯ ಬಿ.ಸಿ.ಎ ವಿದ್ಯಾರ್ಥಿನಿ ಪೂಜಾ ಕಾರ್ಯಕ್ರಮ ನಿರೂಪಿಸಿ, ಲಾವಣ್ಯ ಸ್ವಾಗತಿಸಿ, ದ್ವಿತೀಯ ಪಿಯುಸಿ ಶ್ರೀಶ ವಿಠಲ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!