Sunday, January 19, 2025
Sunday, January 19, 2025

ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕ: ಉಡುಪಿ ಜಿಲ್ಲಾಧಿಕಾರಿ

ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕ: ಉಡುಪಿ ಜಿಲ್ಲಾಧಿಕಾರಿ

Date:

ಉಡುಪಿ, ನ.25: ಪ್ರತಿಯೊಬ್ಬರ ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರ ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಯಾವುದೇ ಒತ್ತಡವಿಲ್ಲದೇ ಪೂರ್ಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಅಜ್ಜರಕಾಡುವಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನು ಹಾರಿ ಬಿಡುವುದರ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದರು. ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಸೇವೆ ಅಪಾರ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದೈನಂದಿನ ಕರ್ತವ್ಯವನ್ನು ನಿಭಾಯಿಸಿಕೊಂಡು ಹೋಗುವುದರ ಜೊತೆಗೆ ಕ್ರೀಡಾ ಅಭಿರುಚಿ ಬೆಳೆಸಿಕೊಂಡಿರುವುದು ಉತ್ತಮ ವಿಚಾರ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಿ ಎಂದರು. ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್.ಎನ್ ಮಾತನಾಡಿ, ಪೊಲೀಸರು ಹಾಗೂ ಸಿಬ್ಬಂದಿಗಳು ಕ್ರೀಡೆಗಳಲ್ಲಿ ಸಕ್ರೀಯವಾಗಿ ಉತ್ಸಾಹದಿಂದ ಪಾಲ್ಗೊಂಡು, ಅದ್ಭುತವಾದ ಪ್ರದರ್ಶನ ನೀಡುವುದರೊಂದಿಗೆ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಎಂದರು. ಕ್ರೀಡಾಕೂಟದಲ್ಲಿ ವಿವಿಧ ಪೊಲೀಸ್ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಡಿಎಆರ್ ಉಡುಪಿಯ ಆರ್.ಎಸ್.ಐ ಅಮೀರ್ ಪಾಶಾ ಪ್ರಮಾಣ ವಚನ ಬೋಧಿಸಿದರು. ಉಡುಪಿ ಡಿಎಆರ್ ಎಪಿಸಿ ಜೀವನ್ ನಾಯ್ಕ್ ಕ್ರೀಡಾಜ್ಯೋತಿ ತಂದರು. ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಸ್ವಾಗತಿಸಿ, ಯೋಗೇಶ್ ನಾಯ್ಕ್ ನಿರೂಪಿಸಿ, ಎಎಸ್‌ಪಿ ಎಸ್.ಟಿ ಸಿದ್ದಲಿಂಗಪ್ಪ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!