Monday, January 20, 2025
Monday, January 20, 2025

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಅಬ್ಬನಡ್ಕ ಭಜಕೆರೆ ಗಮ್ಮತ್ತ್ದ ಕೆಸರ್ದಗೊಬ್ಬು

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಅಬ್ಬನಡ್ಕ ಭಜಕೆರೆ ಗಮ್ಮತ್ತ್ದ ಕೆಸರ್ದಗೊಬ್ಬು

Date:

ಬೆಳ್ಮಣ್, ನ.26: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ರಜತ ಸಂಭ್ರಮಾಚರಣೆ ಅಂಗವಾಗಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನೇತೃತ್ವದಲ್ಲಿ ಕಾರ್ಕಳ ತಾಲೂಕು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಕಾರ್ಕಳ ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಬೆಳ್ಮಣ್ಣು ವಲಯದ ಸಮಸ್ತ ಭಜನಾ ಮಂಡಳಿಗಳ ಸಹಯೋಗದೊಂದಿಗೆ ನಂದಳಿಕೆ ಕುಡುಂದೂರು ಬೆರಣಗುಡ್ಡೆ ಗದ್ದೆಯಲ್ಲಿ ಆದಿತ್ಯವಾರ ಭಜಕೆರೆ ಗಮ್ಮತ್ತ್ದ ಕೆಸರ್ದಗೊಬ್ಬು ಕಾರ್ಯಕ್ರಮ ಜರಗಿತು.

ಉದ್ಘಾಟನಾ ಸಮಾರಂಭ

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಂಕರಪುರ ದ್ವಾರಕಾಮಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀರ್ವಚನ ನೀಡಿದರು. ಉದ್ಯಮಿಗಳಾದ ನಿಟ್ಟೆ ಅರುಣ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸದಾ ನಡೆಸುತ್ತಿರುವ ಕಾರ್ಯವೈಖರಿಯನ್ನು ಪ್ರಶಂಸಿದರು. ಅತಿಥಿಗಳು ಗದ್ದೆಗೆ ಹಾಲೆರೆದು ಕೆಸರ್ದಗೊಬ್ಬು ಕ್ರೀಡಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನಂದಳಿಕೆ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಸ್ಥಾಪಕ ಆಡಳಿತ ಮೊಕ್ತೇಸರರಾದ ಕುಡುಂದೂರು ಶ್ರೀಧರ್ ಶೆಟ್ಟಿ, ನಂದಳಿಕೆ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ತುಕಾರಾಮ ಶೆಟ್ಟಿ, ಬೆರಣಗುಡ್ಡೆ ಸಂಜೀವಿ ಶೆಟ್ಟಿ, ಮಂಗಳೂರು ಕರಾವಳಿ ಭಜನಾ ಸಂಸ್ಕಾರ ವೇದಿಕೆಯ ಪ್ರಧಾನ ಕಾರ್ಯದರ್ಶಿಗಳಾದ ಎರ್ಲಪಾಡಿ ಶ್ರೀನಿವಾಸ ಪೂಜಾರಿ, ಕಾರ್ಕಳ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ಶ್ರೀಕಾಂತ ಫ್ರಭು, ಕಾರ್ಕಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ ಹರೀಶ್ ಕಡ್ತಲ, ಕಾರ್ಕಳ ಭಜನಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಸಾಣೂರು, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸುರೇಶ್ ಕಾಸ್ರಬೈಲು ಮೊದಲಾದವರಿದ್ದರು. ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಶೈಕ್ಷಣಿಕವಾಗಿ, ಕ್ರೀಡಾ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ಬೆಳ್ಮಣ್ಣು ವಲಯದ ಭಜನಾ ಮಂಡಳಿಯ 31 ಸದಸ್ಯರನ್ನು ಸನ್ಮಾನಿಸಲಾಯಿತು.

ಸಮಾರೋಪ ಬಹುಮಾನ ವಿತರಣಾ ಸಮಾರಂಭ

ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಕಾನೊಟ್ಟು ದಿವಾಕರ ಶೆಟ್ಟಿ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತ ಅತಿಥಿಗಳಾಗಿ ಉದ್ಯಮಿ ಅರುಣ್ ಅಜೆಕಾರು, ಜೇಸಿಐ ವಲಯಾಧ್ಯಕ್ಷರಾದ ಗಿರೀಶ್ ಎಸ್. ಪಿ., ಬೆಳ್ಮಣ್ಣು ವಲಯದ ಭಜನಾ ಮಂಡಳಿಗಳ ಒಕ್ಕೂಟದ ಗೌರವಾಧ್ಯಕ್ಷರಾದ ತಾರನಾಥ್ ಬೋಳ, ಬೆಳ್ಮಣ್ಣು ವಲಯದ ಭಜಣಾ ಪರಿಷತ್ ವಲಯಾಧ್ಯಕ್ಷರಾದ ಸಚಿತ್ ಪೂಜಾರಿ, ಬೆಳ್ಮಣ್ಣು ಭಜನಾ ಮಂಡಳಿಗಳ ಒಕ್ಕೂಟದ ವಲಯಾಧ್ಯಕ್ಷರಾದ ರಾಜೇಂದರ ಶೆಟ್ಟಿಗಾರ್, ಕಾರ್ಕಳ ಕರಾವಳಿ ಭಜನಾ ಸಂಸ್ಕಾರ ವೇದಿಕೆಯ ಅಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿ ಕಡಾರಿ, ಕಾರ್ಕಳ ಭಜನಾ ಸಂಸ್ಕಾರ ವೇದಿಕೆಯ ಕೋಶಾಧಿಕಾರಿ ವೆಂಕಟೇಶ್ ಪೂಜಾರಿ ಸಚ್ಚೇರಿಪೇಟೆ, ಬೆಳ್ಮಣ್ಣು ರೋಟಟಿ ಕ್ಲಬ್ ಅಧ್ಯಕ್ಷ ಮುರಳೀಧರ ಜೋಗಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನಿಕಟಪೂರ್ವಾಧ್ಯಕ್ಷೆ ಹರಿಣಾಕ್ಷಿ ಪೂಜಾರಿ, ಉಪಾಧ್ಯಕ್ಷರಾದ ಕೀರ್ತನ್ ಪೂಜಾರಿ, ಕಾರ್ಯದರ್ಶಿ ಶ್ರದ್ಧಾ ಪೂಜಾರಿ, ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯರಾದ ಸದಾನಂದ ಶೆಟ್ಟಿ, ಪದ್ಮಶ್ರೀ ಪೂಜಾರಿ, ಅನ್ನಪೂರ್ಣ, ನಂದಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಬೋಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸತೀಶ್ ಪೂಜಾರಿ, ಕ್ರೀಡಾಪಟು ನಿಟ್ಟೆ ವಿನೀತ್ ಶೆಟ್ಟಿ, ನಂದಳಿಕೆ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಪ್ರಧಾನ ಅರ್ಚಕರಾದ ಮಧುಸೂಧನ್, ಖ್ಯಾತ ನ್ಯಾಯವಾದಿ ಸರಿತಾ ರವೀಂದ್ರ ಶೆಟ್ಟಿ, ಬೆಳ್ಮಣ್ಣು ಕುಂಭನಿಧಿ ಕ್ರೆಡಿಟ್ ಕೋ-ಅಪರೇಟಿವ ಬ್ಯಾಂಕ್ ನಿರ್ದೇಶಕರಾದ ದೀಪಕ್ ಕುಲಾಲ್, ಬೆಳ್ಮಣ್ಣು ಉಷಾ ಶೆಟ್ಟಿ, ಬೆಳ್ಮಣ್ಣು ಕಾಮಾಕ್ಷಿ ಇಂಜಿನಿಯರ‍್ಸ್ ಮಾಲಕರಾದ ಸುಧೀರ್ ಕಾಮತ್, ನಡುಮಣಗುತ್ತು ಸತೀಶ್ ಮಾಡ, ಯುವ ಉದ್ಯಮಿ ಸ್ವರೂಪ್ ಶೆಟ್ಟಿ, ಬೆಳ್ಮಣ್ಣು ಜೇಸಿಐ ನಿಕಟ ಪೂರ್ವಾಧ್ಯಕ್ಷೆ ಸರಿತಾ ದಿನೇಶ್ ಸುವರ್ಣ, ಬೆಳ್ಮಣ್ಣು ಜೇಸಿಐ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಕಾರ್ಕಳ ಅಮ್ಮಾಸ್ ಸ್ಪೋರ್ಟ್ಸ್ ಮತ್ತು ಗಿಫ್ಟ್ ಸೆಂಟರ್ ಮಾಲಕರಾದ ಸುಧೀರ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಮತ್ತು ಸತೀಶ್ ಪೂಜಾರಿ ಕಾರ್ಯಕ್ರಮದ ನಿರ್ದೇಶಕರಾದ ಸಹಕರಿಸಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನಿಕಟಪೂರ್ವಾಧ್ಯಕ್ಷರಾದ ಪ್ರಶಾಂತ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!